ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮಾ 3 ವರ್ಷಗಳ ಕೋರ್ಸ್ ಕಲಿಕೆಗಾಗಿ ಅರ್ಜಿ ಆಹ್ವಾನ

On: May 13, 2025 2:05 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-13-05-2025

ಶಿವಮೊಗ್ಗ: 2025-26ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-12 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು,
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು.

ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ- ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ
ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ -08182-223405 ನ್ನು ಸಂಪರ್ಕಿಸುವುದು. ಆನ್‌ಲೈನ್ https://khtigadag.ac.in/AdmissionForm.pdf ರಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 15/06/2025 ರೊಳಗಾಗಿ ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-ಬೆಟಗೆರಿ-582102 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಕೈಮಗ್ಗ ಮತ್ತು ಜವಳಿ
ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment