ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಧರ್ಮ ಕೇಳಿ ಕೊಂದ್ರು, ನಾವು ಉಗ್ರರ ಮಣ್ಣಲ್ಲಿ ಹೂತಾಕಿದ್ದೇವೆ: ರಾಜನಾಥ್ ಸಿಂಗ್ ಗುಡುಗು!

On: May 15, 2025 1:03 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-15-05-2025

ನವದೆಹಲಿ: ಪಹಲ್ಗಾಮ್ ನಲ್ಲಿ ಧರ್ಮ ಕೇಳಿ ಉಗ್ರರು ಕೊಂದರು. ನಾನು ಉಗ್ರರನ್ನು ಮಣ್ಣಲ್ಲಿ ಹೂತಾಕಿದ್ದೇವೆ. ಇದು ಅವರ ಕರ್ಮ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.

ಅಂತರರಾಷ್ಟ್ರೀಯ ಹಸ್ತಕ್ಷೇಪಕ್ಕೆ ಮನವಿ ಈ ವಾರದ ಆರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ ನೀಡುತ್ತಿರುವ ಹೊಡೆತಕ್ಕೆ ಪಾಕಿಸ್ತಾನ ಮತ್ತು ಭಯೋತ್ಪಾದಕರು ನಡುಗಿ ಹೋಗಿದ್ದಾರೆ. ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಗುರಿಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ಕಣಿವೆಗೆ ಮೊದಲ ಭೇಟಿಯಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದರು.

ಸಿಂಗ್ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇದ್ದರು. ಭೇಟಿಯ ಸಮಯದಲ್ಲಿ, ರಕ್ಷಣಾ ಸಚಿವರು ಒಟ್ಟಾರೆ ಭದ್ರತಾ ಸನ್ನಿವೇಶ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಯುದ್ಧ ಸನ್ನದ್ಧತೆಯನ್ನು ಪರಿಶೀಲಿಸಿದರು ಮತ್ತು ಗಡಿ ಪ್ರದೇಶಗಳಲ್ಲಿ ಬೀಳಿಸಲಾದ ಪಾಕಿಸ್ತಾನಿ ಶೆಲ್‌ಗಳನ್ನು ಪರಿಶೀಲಿಸಿದರು. ಸೇನೆಯ 15 ಕಾರ್ಪ್ಸ್ ಪ್ರಧಾನ ಕಚೇರಿಗೆ ಭೇಟಿ ನೀಡಿ ಸೇನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

ಸಶಸ್ತ್ರ ಪಡೆಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಸಿಂಗ್, “ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಧೈರ್ಯಶಾಲಿ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಕಾರ್ಯಕ್ಕೆ ನಾನು ಗೌರವ ಸಲ್ಲಿಸುತ್ತೇನೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ಮುಗ್ಧ ನಾಗರಿಕರಿಗೂ ನಾನು ಗೌರವ ಸಲ್ಲಿಸುತ್ತೇನೆ. ಗಾಯಗೊಂಡ ಸೈನಿಕರ ಶೌರ್ಯಕ್ಕೂ ನಾನು ವಂದಿಸುತ್ತೇನೆ ಮತ್ತು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಆಪರೇಷನ್ ಸಿಂದೂರ್ ಅನ್ನು “ದೊಡ್ಡ ಬದ್ಧತೆ” ಎಂದು ಕರೆದ ರಕ್ಷಣಾ ಸಚಿವರು, “ಇದು ಭಯೋತ್ಪಾದನೆಯ ವಿರುದ್ಧದ ಅತಿದೊಡ್ಡ ಕಾರ್ಯಾಚರಣೆ. ಭಯೋತ್ಪಾದನೆಯನ್ನು ಕೊನೆಗೊಳಿಸಲು ನಾವು ಯಾವುದೇ ಹಂತಕ್ಕೂ ಹೋಗುತ್ತೇವೆ. ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ನಿಲ್ಲಿಸಬೇಕು” ಎಂದು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment