ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನುಡಿದಂತೆ ನಡೆದಿದ್ದೇವೆ, ಹೇಳಿದ್ದನ್ನು ಮಾಡಿದ್ದೇವೆ: ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಗೆ ತಿವಿದ ಸಿಎಂ ಸಿದ್ದರಾಮಯ್ಯ

On: May 16, 2025 7:30 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-16-05-2025

ಮಂಗಳೂರು: ನಾವು ನುಡಿದಂತೆ ನಡೆದಿದ್ದೇವೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡುವ ಭರವಸೆ ನೀಡಿದ್ದೆವು. ಅದರಂತೆ ಪುತ್ತೂರಿಗೂ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಸದ್ಯ 250 ಬೆಡ್ ಗಳ ಆಸ್ಪತ್ರೆ ಮಾಡ್ತೀವಿ. ಆಮೇಲೆ ಮತ್ತೆ 250 ಬೆಡ್ ಗಳನ್ನು ವಿಸ್ತರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ ಮಾತನಾಡಿದರು.

ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆವು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಬಿಜೆಪಿ ಅವಧಿಯಲ್ಲಿ ಉದ್ಘಾಟನೆ ಆಗಲಿಲ್ಲ ಏಕೆ ಎಂದು ವೇದಿಕೆಯಲ್ಲೇ ಇದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ. ಶೇ15-16 ರಷ್ಟು ಮಾತ್ರ ವಾಪಾಸ್ ಕೊಡುತ್ತಿದೆ. ಇದು ಕೇಂದ್ರ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು , ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸಿ ಎಂದು ಶಾಸಕ ಕಾಮತ್ ಅವರಿಗೆ ಕಿವಿ ಮಾತು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment