SUDDIKSHANA KANNADA NEWS/ DAVANAGERE/ DATE-17-05-2025
ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 21 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಉದ್ಯೋಗ ಮೇಳದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ನಗರದ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.