Home ಕ್ರೈಂ ನ್ಯೂಸ್ ಕ್ಷುಲ್ಲಕ ಕಾರಣಕ್ಕೆ ಪತಿ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ: ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದಾವಣಗೆರೆ ನ್ಯಾಯಾಲಯ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಪತಿ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ: ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದಾವಣಗೆರೆ ನ್ಯಾಯಾಲಯ!

Share
ಪತಿ
Share

ದಾವಣಗೆರೆ: ಕುಟುಂಬದ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಪತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದ ಆರೋಪಿ ಪತ್ನಿಗೆ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಕೋಗಲೂರು ಗ್ರಾಮದ ರೇಖಾ (36) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾಳೆ.

ಕಳೆದ ಹಲವು ದಿನಗಳಿಂದ ಸಂಸಾರದ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡಿಕೊಳ್ಳುತ್ತಿದ್ದ ರೇಖಾ, ದಿನಾಂಕ 21/03/2023 ರಂದು ರಾತ್ರಿ ಪತಿ ಶಾಂತಕುಮಾರ್ ಮಲಗಿದ್ದಾಗ ಕೊಲೆ ಮಾಡುವ ಉದ್ದೇಶದಿಂದ ಕೊಡಲಿಯಿಂದ ತಲೆಗೆ ತೀವ್ರವಾಗಿ ಹೊಡೆದಿದ್ದಳು. ತೀವ್ರ ರಕ್ತಗಾಯಗೊಂಡಿದ್ದ ಶಾಂತಕುಮಾರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 25/08/2023 ರಂದು ಮೃತಪಟ್ಟಿದ್ದರು. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಕೃಷ್ಣಮೂರ್ತಿ ಆರ್. ಪಡಸಲಗಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದ್ದಾರೆ.

ಘಟನೆಯ ವಿವರ: 16 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ ನಡುವೆ ಇತ್ತೀಚೆಗೆ ಸಂಸಾರದ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ದಿನಾಂಕ 21/03/2023 ರಂದು ರಾತ್ರಿ ಮಲಗಿದ್ದ ಪತಿಯ ತಲೆಗೆ ಪತ್ನಿ ಕೊಡಲಿಯಿಂದ ದಾಳಿ ನಡೆಸಿದ್ದಳು.

ತನಿಖೆ ಮತ್ತು ಆರೋಪಪಟ್ಟಿ: ಸಂತೆಬೆನ್ನೂರು ವೃತ್ತದ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಲಿಂಗನಗೌಡ ನೆಗಳೂರು ಅವರು ಪ್ರಕರಣದ ಸತ್ಯಾಸತ್ಯತೆಯನ್ನು ತನಿಖೆ ನಡೆಸಿ, ವೈದ್ಯಕೀಯ ಸಾಕ್ಷ್ಯಾಧಾರಗಳೊಂದಿಗೆ ಕಲಂ 302 ಐಪಿಸಿ ರೀತ್ಯಾ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದ ತೀರ್ಪು: ಎಸ್‌ಸಿ ನಂ :32/2024 ರ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಸರ್ಕಾರಿ ವಕೀಲರಾದ ಶ್ರೀ ಜಯ್ಯಪ್ಪ .ಕೆ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಕರಣದಲ್ಲಿ ಯಶಸ್ವಿಯಾಗಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಲಿಂಗನಗೌಡ ನೆಗಳೂರು, ಅವರ ಸಿಬ್ಬಂದಿ ವರ್ಗ ಹಾಗೂ ಪ್ರಕರಣವನ್ನು ಸಮರ್ಥವಾಗಿ ನ್ಯಾಯಾಲಯದಲ್ಲಿ ಮಂಡಿಸಿದ ಸರ್ಕಾರಿ ವಕೀಲ ಜಯ್ಯಪ್ಪ .ಕೆ ಅವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಶೇಖರ್ ಹೆಚ್.ಟಿ ಐಪಿಎಸ್ ರವರು ಶ್ಲಾಘಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *