ನವದೆಹಲಿ: ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಗವಾನ್ ಶಿವನ ಸಂಕೇತ ಹಾಗೂ ‘ಸತ್ಯಂ ಶಿವಂ ಸುಂದರಂ’ ಎಂಬ ಸಂಸ್ಕೃತ ನುಡಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳು ಹೋರಾಟವನ್ನು ತೀವ್ರಗೊಳಿಸಿವೆ.
ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಚುನಾವಣಾ ಆಯೋಗದ (ECI) ಕಾರ್ಯವೈಖರಿಯನ್ನು ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಬ್ಲಾಕ್ ಒಕ್ಕೂಟವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಚುನಾವಣಾ ಆಯೋಗದ ನಿರ್ಧಾರಗಳು ಏಕಪಕ್ಷೀಯವಾಗಿವೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದರೆ, ಎಲ್ಲಾ ಮೂರು ಆದೇಶಗಳು ಸರ್ವಾನುಮತದಿಂದ ಕೈಗೊಂಡ ತೀರ್ಮಾನಗಳಾಗಿವೆ ಎಂದು ಆಯೋಗವು ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ.
ಶಿವನ ಸ್ಮರಣೆ & ಪೋಸ್ಟ್: ಸುಪ್ರೀಂ ಕೋರ್ಟ್ ವಿಚಾರಣೆಯ ದಿನದಂದೇ ರಾಹುಲ್ ಗಾಂಧಿ ಅವರು ಶಿವನ ಮೂರು ಅಡ್ಡನಾಮ ಹಾಗೂ ಕೆಂಪು ಗೆರೆಯ ಚಿಹ್ನೆಯೊಂದಿಗೆ ‘ಸತ್ಯಂ ಶಿವಂ ಸುಂದರಂ’ ಎಂದು ಪೋಸ್ಟ್ ಮಾಡಿದ್ದಾರೆ.
ವಿಪಕ್ಷಗಳ ಆಕ್ಷೇಪ: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಫಾರ್ಮ್ 6 ಬದಲಾವಣೆಗಳನ್ನು ವಿರೋಧಿಸಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ನಾಯಕರು ಸುಪ್ರೀಂ ಕೋರ್ಟ್ನಲ್ಲಿ ದೂರು ದಾಖಲಿಸಿದ್ದಾರೆ.
ಚುನಾವಣಾ ಆಯೋಗದ ಸ್ಪಷ್ಟನೆ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆಂಬ ಆರೋಪವನ್ನು ತಳ್ಳಿಹಾಕಿರುವ ಆಯೋಗ, ಇದು ಮೂವರು ಸದಸ್ಯರ ಒಮ್ಮತದ ತೀರ್ಮಾನ ಎಂದಿದೆ.
‘ತಾಂಡವ’ ಎಚ್ಚರಿಕೆ: ಮತಚೋರಿ ಆರೋಪ ಹಾಗೂ ಚುನಾವಣಾ ಆಯೋಗದ ವಿರುದ್ಧ ತಮ್ಮ ವಿರೋಧವನ್ನು ಮುಂದುವರಿಸುವುದಾಗಿ ತಿಳಿಸಿರುವ ರಾಹುಲ್ ಗಾಂಧಿ, ಈ ಹೋರಾಟವನ್ನು ಶಿವನ ‘ತಾಂಡವ’ ನೃತ್ಯಕ್ಕೆ ಹೋಲಿಸಿದ್ದಾರೆ.





Leave a comment