Home ದಾವಣಗೆರೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಭರ್ಜರಿ ಜಯ, ಈ ದೀಪಾವಳಿಯಿಂದಲೇ ನರಕಾಸುರನ ಪತನ ಆರಂಭ: 2028ರ ವಿಧಾನಸಭೆ ಚುನಾವಣೆಗೆ ಸ್ಪಷ್ಟ ಜನಾದೇಶ ಎಂದ್ರು ಹೆಚ್ ಡಿಕೆ!
ದಾವಣಗೆರೆಬೆಂಗಳೂರು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಭರ್ಜರಿ ಜಯ, ಈ ದೀಪಾವಳಿಯಿಂದಲೇ ನರಕಾಸುರನ ಪತನ ಆರಂಭ: 2028ರ ವಿಧಾನಸಭೆ ಚುನಾವಣೆಗೆ ಸ್ಪಷ್ಟ ಜನಾದೇಶ ಎಂದ್ರು ಹೆಚ್ ಡಿಕೆ!

Share
ಚುನಾವಣೆ
Share

ಬೆಂಗಳೂರು: ಸತ್ಯಮೇವ ಜಯತೆ. ಸುಳ್ಳು, ದುರಾಡಳಿತ, ಹಣಬಲ, ತೋಳ್ಬಲಗಳು ಸೋತಿವೆ. ಈ ಚುನಾವಣೆ ಹೊಸ ಭರವಸೆಯ ಸೂರ್ಯೋದಯಕ್ಕೆ ನಾಂದಿ ಹಾಡಿದೆ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟವು ಭರ್ಜರಿ ಜಯಭೇರಿ ಸಾಧಿಸಿದ್ದು, ನಮ್ಮ ಒಮ್ಮತದ ಅಭ್ಯರ್ಥಿ ಎ.ಪಿ.ರಂಗನಾಥ್ ಅವರಿಗೆ ಅಭಿನಂದನೆಗಳು. ಹಾಗೆಯೇ, ಉಳಿದ ಮೂರು ಕ್ಷೇತ್ರಗಳಲ್ಲಿಯೂ NDA ಅಭ್ಯರ್ಥಿಗಳ ಗೆಲುವು ಖಚಿತ ಎಂದಿದ್ದಾರೆ.

ಈ ಸಂತೋಷದ ಸಂದರ್ಭದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಸಮಸ್ತ ಕಾರ್ಯಕರ್ತ ಬಂಧುಗಳು, ಮುಖಂಡರು ಹಾಗೂ ಆಮಿಷ, ಅಧಿಕಾರದ ದರ್ಪವನ್ನು ದಿಕ್ಕರಿಸಿ ತಮ್ಮ ಅಮೂಲ್ಯ ಮತಗಳನ್ನು ಚಲಾಯಿಸಿದ ಶಿಕ್ಷಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತೇನೆ. ಗುರುವೇ ದಾರಿ ಎನ್ನುವಂತೆ ಮುಂದಿನ ಬದಲಾವಣೆಗೆ ಭಾಷ್ಯ ಬರೆದಿದ್ದಾರೆ
ಎಂದು ಹೇಳಿದ್ದಾರೆ.

ಈ ಗೆಲುವು ಐತಿಹಾಸಿಕ. 2028ರ ವಿಧಾನಸಭೆ ಚುನಾವಣೆಗೆ ಸ್ಪಷ್ಟ ಜನಾದೇಶ. ಒಗ್ಗಟ್ಟು ಮತ್ತು ಮೈತ್ರಿಯಲ್ಲಿ ಶಕ್ತಿ ಇದೆ ಎಂಬುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆ. ಈ ದೀಪಾವಳಿಯಿಂದಲೇ ನರಕಾಸುರನ ಪತನ ಆರಂಭ, ಮುಂದಿನ ದೀಪಾವಳಿಗೆ ಕನ್ನಡ ನಾಡಿನಲ್ಲಿ ಮೈತ್ರಿಯ ಮುಂಬೆಳಕು ಮೂಡುವುದು ಖಚಿತ ಎಂದು ಹೇಳಿದ್ದಾರೆ.

ನಮ್ಮ ಮೈತ್ರಿಯ ಪ್ರೇರಕಶಕ್ತಿ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೂ ನನ್ನ ಕೃತಜ್ಞತೆಗಳು ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles