ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ನಾಲ್ಕೂ ಸ್ಥಾನಗಳಲ್ಲಿ ಎನ್.ಡಿ.ಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದು, ಈ ಫಲಿತಾಂಶವು ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ನೀಡಿದ ತಕ್ಕ ಉತ್ತರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಇವಿಎಂ ಹಾಗೂ ಬ್ಯಾಲೆಟ್ ಮತದಾನದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಮತ್ತು ‘ಇಂಡಿ’ (INDI) ಒಕ್ಕೂಟದ ನಾಯಕರಿಗೆ ಪದವೀಧರ ಹಾಗೂ ಶಿಕ್ಷಕ ಮತದಾರರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಈ ಎಂಎಲ್ಸಿ ಚುನಾವಣೆ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಿಕ್ಕ ಬೆಂಬಲವಾಗಿದ್ದು, 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪಷ್ಟ ದಿಕ್ಸೂಚಿಯಾಗಿದೆ ಎಂದು ವಿಜಯೇಂದ್ರ ಬಣ್ಣಿಸಿದ್ದಾರೆ.
ಕಾಂಗ್ರೆಸ್ ಅಪಪ್ರಚಾರಕ್ಕೆ ಹಿನ್ನಡೆ: ಮತ ಕಳವು, ಸಾಂವಿಧಾನಿಕ ಸಂಸ್ಥೆಗಳ ಮೇಲಿನ ದಾಳಿ ಹಾಗೂ ಇವಿಎಂ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ಗೆ “ನೀವು ಯಾವ ಮಾರ್ಗದಲ್ಲಿ ಬಂದರೂ ನಮ್ಮ ಉತ್ತರ ಒಂದೇ” ಎಂದು ಮತದಾರರು ಬ್ಯಾಲೆಟ್ ಮೂಲಕವೇ ಉತ್ತರ ನೀಡಿದ್ದಾರೆ ಎಂದಿದ್ದಾರೆ.
ಮತದಾರರಿಗೆ ಕೃತಜ್ಞತೆ: ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸಿದ ಎಲ್ಲಾ ಶಿಕ್ಷಕ ಹಾಗೂ ಪದವೀಧರ ಮತದಾರರಿಗೆ ಬಿ.ವೈ. ವಿಜಯೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.





Leave a comment