ದಾವಣಗೆರೆ:ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಆರ್ಥಿಕ ಹೊರೆ ಹೊರಿಸುತ್ತಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ ಹಾಗೂ ದಿನನಿತ್ಯದ ಜೀವನ ವೆಚ್ಚದಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲಿನ ದರವನ್ನು ₹8 ಹೆಚ್ಚಿಸುವ ನಿರ್ಧಾರ ಜನರ ಕುಟುಂಬದ ಬಜೆಟ್ಗೆ ದೊಡ್ಡ ಹೊಡೆತ ನೀಡಲಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಪ್ರತಿಯೊಂದು ಕುಟುಂಬಕ್ಕೂ ಹಾಲು ಅತ್ಯಗತ್ಯವಾಗಿದ್ದು, ಈ ದರ ಏರಿಕೆಯ ಪರಿಣಾಮ ಸಾಮಾನ್ಯ ಜನರ ಬದುಕಿನ ಮೇಲೆ ನೇರವಾಗಿ ಬೀಳಲಿದೆ.
ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯವೇ ಸರಿ. ಆದರೆ ಗ್ರಾಹಕರ ಹಿತವನ್ನೂ ಸರ್ಕಾರ ಮರೆಯಬಾರದು. ರೈತರಿಗೆ ನ್ಯಾಯಯುತ ಬೆಲೆ ನೀಡುವ ಜೊತೆಗೆ ಬಡ ಗ್ರಾಹಕರಿಗೆ ಹೊರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವುದು ಎಷ್ಟು ಸಮಂಜಸ? ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಬೇಕು. ಹಾಲಿನ ದರ ಏರಿಕೆಯನ್ನು ಮರುಪರಿಶೀಲಿಸಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಶಿವನಗೌಡ ಟಿ. ಪಾಟೀಲ್ ಅವರು ಆಗ್ರಹಿಸಿದ್ದಾರೆ.





Leave a comment