Home ದಾವಣಗೆರೆ ತುಂಗಾ ಜಲಾಶಯದ ಮುಕ್ತಿನಕೊಪ್ಪ ಏತ ನೀರಾವರಿ ಯೋಜನೆಗೆ ₹30 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಡಿಕೆಶಿಗೆ ಮನವಿ: ಎಂ.ಪಿ. ರೇಣುಕಾಚಾರ್ಯ
ದಾವಣಗೆರೆಬೆಂಗಳೂರು

ತುಂಗಾ ಜಲಾಶಯದ ಮುಕ್ತಿನಕೊಪ್ಪ ಏತ ನೀರಾವರಿ ಯೋಜನೆಗೆ ₹30 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಡಿಕೆಶಿಗೆ ಮನವಿ: ಎಂ.ಪಿ. ರೇಣುಕಾಚಾರ್ಯ

Share
ತುಂಗಾ
Share

ಬೆಂಗಳೂರು / ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಬಹುದಿನಗಳ ಬೇಡಿಕೆಯಾದ ತುಂಗಾ ಜಲಾಶಯದ ಮುಕ್ತಿನಕೊಪ್ಪ ಏತ ನೀರಾವರಿ ಯೋಜನೆಗೆ ಅಗತ್ಯವಿರುವ ₹30 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಹಾಗೂ ಯೋಜನೆಗೆ 17.40 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕೋರಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ‘ಕೃಷ್ಣ’ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಈ ಯೋಜನೆಗೆ ಅಗತ್ಯವಿರುವ ಪರಿಸರ ಇಲಾಖೆಯ ಅನುಮತಿಗಳನ್ನು ಶೀಘ್ರವೇ ಕೊಡಿಸುವಂತೆಯೂ ಮನವರಿಕೆ ಮಾಡಿಕೊಡಲಾಗಿದೆ. ಮುಕ್ತಿನಕೊಪ್ಪ ಏತ ನೀರಾವರಿ
ಯೋಜನೆ ಪೂರ್ಣಗೊಂಡರೆ ಹೊನ್ನಾಳಿ, ಚನ್ನಗಿರಿ, ಹರಿಹರ ಹಾಗೂ ಮಾಯಕೊಂಡ ಸೇರಿದಂತೆ ದಾವಣಗೆರೆ ಜಿಲ್ಲೆಯ ಸುಮಾರು 95 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶದ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ರೈತರ ಬದುಕು ಹಸನಾಗಲು ಮತ್ತು ಜಿಲ್ಲೆಯ ಸಮಗ್ರ ಕೃಷಿ ಅಭಿವೃದ್ಧಿಗೆ ಈ ನೀರಾವರಿ ಯೋಜನೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಅವರು ಒತ್ತಿಹೇಳಿದ್ದಾರೆ.

ಮುಕ್ತಿನಕೊಪ್ಪ ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು 30 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕೋರಲಾಗಿದೆ. ಯೋಜನೆಗೆ 17.40 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಮತ್ತು ಪರಿಸರ ಇಲಾಖೆಯಿಂದ ಅಗತ್ಯ ಅನುಮತಿಗಳನ್ನು ಕೊಡಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles