ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸವಿತಾ ಸಮಾಜ ಅಭಿವೃದ್ಧಿ ನಿಗಮ: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

On: June 6, 2025 11:28 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-06-06-2025

ಬಳ್ಳಾರಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:

ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸವಿತಾ ಸಮಾಜ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾನುಭಾವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಯೋಜನೆಗಳ ವಿವರ:

ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ(ಈ ಯೋಜನೆಯಡಿ ಅರ್ಜಿ www.kaushalkar.com ನಲ್ಲಿ ಸಲ್ಲಿಸಬೇಕು).

ಅರ್ಜಿಗಳನ್ನು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಸವಿತಾ ಸಮಾಜ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment