SUDDIKSHANA KANNADA NEWS/ DAVANAGERE/ DATE-06-06-2025
ಬೆಂಗಳೂರು: ಬೆಂಗಳೂರಿನಲ್ಲಿ ಆರ್ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ.ಕುಮಾರಸ್ವಾಮಿ ಅವರು ಮತ್ತು ಬಿಜೆಪಿಯವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ ಎಂಬ ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.