Home ದಾವಣಗೆರೆ ವಿದ್ಯಾಸಿರಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ
ದಾವಣಗೆರೆಬೆಂಗಳೂರುವಾಣಿಜ್ಯ

ವಿದ್ಯಾಸಿರಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ

Share
ಅರ್ಜಿ
Share

ದಾವಣಗೆರೆ: 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಸಿಗುವ ವಿವಿಧ ಸೌಲಭ್ಯಗಳ ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ಈ ಅವಧಿಯನ್ನು ವಿಸ್ತರಿಸಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

ಲಭ್ಯವಿರುವ ಯೋಜನೆಗಳು: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ.

ಅರ್ಜಿ ಸಲ್ಲಿಕೆ ಜಾಲತಾಣ: ಅಧಿಕೃತ SSP ಪೋರ್ಟಲ್ https://ssp.postmatric.karnataka.gov.in/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಸಂಪರ್ಕ ವಿವರಗಳು: ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು. ಅಧಿಕೃತ ವೆಬ್‌ಸೈಟ್ https://bcwd.karnataka.gov.in/ ಹಾಗೂ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ನ್ನು ಸಂಪರ್ಕಿಸಲು ಕೋರಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ತಿಳಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles