Home ಕ್ರೈಂ ನ್ಯೂಸ್ ಗರಗಸ ದಾಳಿಕೋರನ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿ ಕಾಲಿಗೆ ಗುಂಡೇಟು, ಬಾಲಕಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಮುಂದುವರಿಕೆ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಗರಗಸ ದಾಳಿಕೋರನ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿ ಕಾಲಿಗೆ ಗುಂಡೇಟು, ಬಾಲಕಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಮುಂದುವರಿಕೆ

Share
ವಿದ್ಯಾರ್ಥಿನಿ
Share

ಅಮರಾವತಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಶಾಲೆಯೊಂದಕ್ಕೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಗರಗಸದಿಂದ ಭೀಕರ ದಾಳಿ ನಡೆಸಿದ್ದ ಪ್ರಮುಖ ಆರೋಪಿ ಹೇಮಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರದಂದು ಆತ್ಕೂರು ಸಮೀಪ ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಮೇಲೆ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆತನ ಕಾಲಿಗೂ ಗುಂಡೇಟು ಬಿದ್ದಿದ್ದು, ಗಾಯಗೊಂಡಿದ್ದಾನೆ. ಈ ಘಟನೆಯಲ್ಲಿ ವೃತ್ತ ನಿರೀಕ್ಷಕರಿಗೂ ಗಾಯಗಳಾಗಿವೆ.

ಶನಿವಾರ ಬೆಳಿಗ್ಗೆ ಶಾಲೆಗೆ ನುಗ್ಗಿದ್ದ ಹೇಮಂತ್ ವಿದ್ಯಾರ್ಥಿನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಇದರಿಂದ ವಿದ್ಯಾರ್ಥಿನಿಯ ಮುಖ, ತಲೆ ಹಾಗೂ ಕುತ್ತಿಗೆಗೆ ಗಂಭೀರ ಗಾಯಗಳಾಗಿದ್ದು, ಬಲಕೈ ಕೂಡ ಕಟ್ ಆಗಿತ್ತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಯನ್ನು ಮೊದಲು ಅನಂತಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಗ್ರೀನ್ ಕಾರಿಡಾರ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಸುಮಾರು 12 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಸದ್ಯ ಮುಂದಿನ 48 ಗಂಟೆಗಳು ಅತ್ಯಂತ ನಿರ್ಣಾಯಕ ಎಂದು ವೈದ್ಯರು ತಿಳಿಸಿದ್ದು, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪೊಲೀಸರ ಪ್ರತಿದಾಳಿ: ಬಂಧನದ ವೇಳೆ ಚಾಕುವಿನಿಂದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಹೇಮಂತ್ ಕಾಲುಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿ: ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ ಮುಂದುವರಿದಿದ್ದು, ಮುಂದಿನ 48 ಗಂಟೆಗಳು ನಿರ್ಣಾಯಕವಾಗಿವೆ.

ಸರ್ಕಾರದ ಭರವಸೆ: ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಘಟನೆಯನ್ನು ಖಂಡಿಸಿದ್ದು, ಸಂತ್ರತೆಯ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವುದಾಗಿ ತಿಳಿಸಿದ್ದಾರೆ.

ರಾಜಕೀಯ ಆಕ್ರೋಶ: ವಿದ್ಯಾರ್ಥಿನಿಯರ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷ ವೈಎಸ್‌ಆರ್‌ಸಿಪಿ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದೆ.

ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles