SUDDIKSHANA KANNADA NEWS/ DAVANAGERE/ DATE:26-09-2023
ದಾವಣಗೆರೆ (Davanagere): ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ:
BIG BREAKING NEWS: ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಭದ್ರಾ ಡ್ಯಾಂ(Bhadra Dam)ನ ಭದ್ರಾ ಬಲದಂಡೆ, ಎಡದಂಡೆ ನಾಲೆಗಳಿಗೆ ಇಂದಿನಿಂದ ನೀರು, ಎಷ್ಟು ದಿನಗಳ ಕಾಲ ಹರಿಯಲಿದೆ ಜೀವಜಲ…?
ಆನಗೋಡು ಸಮೀಪ ಹುಳುಪಿನಕಟ್ಟೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಈ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕರ ಎರಡು ಹುದ್ದೆಗೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು, ಇಲ್ಲಿ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:9742313992, 9481867596 ಸಂಪರ್ಕಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಜಿ.ಕೊಟ್ರೇಶ್ ತಿಳಿಸಿದ್ದಾರೆ.