Home ದಾವಣಗೆರೆ ಗೃಹಲಕ್ಷ್ಮಿ ಯೋಜನೆಯಲ್ಲಿ ₹5,000 ಕೋಟಿ ಮಹಾ ವಂಚನೆ ಮತ್ತು ಖಜಾನೆ ದಿವಾಳಿ: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಗೃಹಲಕ್ಷ್ಮಿ ಯೋಜನೆಯಲ್ಲಿ ₹5,000 ಕೋಟಿ ಮಹಾ ವಂಚನೆ ಮತ್ತು ಖಜಾನೆ ದಿವಾಳಿ: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ!

Share
ಗೃಹಲಕ್ಷ್ಮಿ
Share

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರಿಗೆ ನೀಡಬೇಕಾದ ಮಾಸಿಕ ಭತ್ಯೆಯಲ್ಲಿ ಬೃಹತ್ ಅಕ್ರಮ ನಡೆದಿದ್ದು, ರಾಜ್ಯದ ಖಜಾನೆ ಸಂಪೂರ್ಣ ದಿವಾಳಿಯಾಗಿದೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಸಮಯದಲ್ಲಿ 1.27 ಕೋಟಿ ಮಹಿಳೆಯರಿಗೆ ತಿಂಗಳಿಗೆ ₹2,000 ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಪ್ರಸ್ತುತ ಫಲಾನುಭವಿಗಳಿಗೆ ಒಟ್ಟು ₹5,000 ಕೋಟಿಗೂ ಹೆಚ್ಚು ಹಣವನ್ನು ಬಾಕಿ ಉಳಿಸಿಕೊಂಡು ತಾಯಂದಿಗೆ ಬೆನ್ನಿಗೆ ಚೂರಿ ಹಾಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಣ ಬಿಡುಗಡೆಯಾಗದಿರುವುದಕ್ಕೆ ತಾಂತ್ರಿಕ ದೋಷ ಕಾರಣವೆಂದು ಜನತೆಗೆ ಸುಳ್ಳು ಹೇಳಿದ್ದಾರೆ. ಆದರೆ ಉಚ್ಚ ನ್ಯಾಯಾಲಯದಲ್ಲಿ ಸರ್ಕಾರದ ಆರ್ಥಿಕ ಇಲಾಖೆಯು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ‘ಹಣಕಾಸಿನ ತೀವ್ರ ಅಭಾವದಿಂದ ಅನುದಾನ ನೀಡಲು ಸಾಧ್ಯವಾಗಿಲ್ಲ’ ಎಂದು ಖಜಾನೆ ಖಾಲಿಯಾಗಿರುವುದನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಲ್ಲದೆ, ಸಂಕ್ಷೇಮ ಯೋಜನೆಗಳು ಪ್ರಜೆಗಳ ಕಾನೂನಾತ್ಮಕ ಹಕ್ಕಲ್ಲ ಎಂದು ನ್ಯಾಯಾಲಯದಲ್ಲಿ ಸರ್ಕಾರ ವಾದ ಮಾಡಿರುವುದು ಖಂಡನೀಯ ಎಂದಿದ್ದಾರೆ.

₹5,000 ಕೋಟಿ ಬಾಕಿ ವಂಚನೆ: 2025ರ ಫೆಬ್ರಕ್ತಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡದೆ, ಫಲಾನುಭವಿ ತಾಯಂದಿರಿಗೆ ತಲಾ ₹4,000 ರಂತೆ ಒಟ್ಟು ₹5,000 ಕೋಟಿಗೂ ಅಧಿಕ ಹಣವನ್ನು ಬಾಕಿ ಉಳಿಸಲಾಗಿದೆ.

ವಿಧಾನಸಭೆಗೆ ಸುಳ್ಳು, ಹೈಕೋರ್ಟ್‌ನಲ್ಲಿ ಸತ್ಯ: ಸದನದಲ್ಲಿ ಸರ್ವರ್ ಸಮಸ್ಯೆ ಎಂದು ಸುಳ್ಳು ಹೇಳಿರುವ ಸರ್ಕಾರ, ಹೈಕೋರ್ಟ್‌ನಲ್ಲಿ (WP 15855/2026) ಹಣಕಾಸಿನ ಅಭಾವ ಹಾಗೂ ಖಜಾನೆ ಖಾಲಿಯಾಗಿರುವುದಾಗಿ ಅಫಿಡವಿಟ್ ಸಲ್ಲಿಸಿದೆ.

ಉಗ್ರ ಹೋರಾಟದ ಎಚ್ಚರಿಕೆ: ಬಾಕಿ ಇರುವ ಸಂಪೂರ್ಣ ₹5,000 ಕೋಟಿ ಹಣವನ್ನು ಮಹಿಳೆಯರ ಖಾತೆಗೆ ತಕ್ಷಣ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಜೆಡಿಎಸ್ ಪಕ್ಷದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles