ದಾವಣಗೆರೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ವಿದ್ಯಾರ್ಥಿನಿಯೊಬ್ಬನ್ನು ಸಹಪಾಠಿಯೊಬ್ಬ ಕರೆದಿದ್ದ. ಕಳೆದ ಜೂನ್ ತಿಂಗಳಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯನ್ನು ಆತನ ಸ್ನೇಹಿತನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ಘಟನೆಯ ಹಿನ್ನೆಲೆ: ಮದುವೆಯಾಸೆ ತೋರಿಸಿ ಸಹಪಾಠಿಯೇ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ವಿಡಿಯೋ ವೈರಲ್ ಕೃತ್ಯ: ಅತ್ಯಾಚಾರದ ದೃಶ್ಯವನ್ನು ಸ್ನೇಹಿತನೊಬ್ಬ ಮೊಬೈಲ್‌ನಲ್ಲಿ ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾನೆ.
ಪೊಲೀಸ್ ತನಿಖೆ: ಸಂತ್ರತ ವಿದ್ಯಾರ್ಥಿನಿಯ ದೂರಿನ ಮೇರೆಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿಗಳಿಗಾಗಿ ಶೋಧ: ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ಇಬ್ಬರೂ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಜಗಳೂರು ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಚಿತ್ರದುರ್ಗ ಮತ್ತು ಜಗಳೂರಿನ ಇಬ್ಬರ ವಿರುದ್ಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಜಗಳೂರು ಪೊಲೀಸರು ತಿಳಿಸಿದ್ದಾರೆ.





Leave a comment