ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಇಂದು ಬಂದ್ ಗೆ ಕರೆ ಕೊಟ್ಟಿರುವ ಆಯೋಜಕರಿಗೆ ಪೊಲೀಸ್ ಇಲಾಖೆ ಕೊಟ್ಟಿರುವ ಎಚ್ಚರಿಕೆಗಳು ಏನು…? ಕಾನೂನು ಉಲ್ಲಂಘಿಸಿದರೆ ಕೇಸ್ ಬೀಳೋದು ಗ್ಯಾರಂಟಿ..!

On: September 29, 2023 1:51 AM
Follow Us:
DAVANAGERE POLICE WARNING
---Advertisement---

SUDDIKSHANA KANNADA NEWS/ DAVANAGERE/ DATE:29-09-2023

ದಾವಣಗೆರೆ(Davanagere): ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದ್ದು, ದಾವಣಗೆರೆಯಲ್ಲಿಯೂ ಬಂದ್ ಬೆಂಬಲಿಸಿ ವಿವಿಧ ರಾಜಕೀಯ ಪಕ್ಷಗಳು, ಕನ್ನಡ ಒಕ್ಕೂಟ, ಕರ್ನಾಟಕ ರಾಜ್ಯ ಹಾಗೂ ಇತರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಂದ್ ಕರೆ ಕೊಟ್ಟಿರುವ ಆಯೋಜಕರಿಗೆ Davanagere ಪೊಲೀಸ್ ಇಲಾಖೆಯು ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ಕೊಟ್ಟಿದೆ.

READ ALSO THIS STORY:

Davanagere: ಮಿಲಾದ್ ಗುಂಬಸ್ ಗೆ ಸಚಿವ ಮಲ್ಲಿಕಾರ್ಜನ್ ಮಾಲಾರ್ಪಣೆ: ಈದ್ ಮಿಲಾದ್ ಹಬ್ಬದಲ್ಲಿ ದೇಶದ ಶಾಂತಿ, ಸಮೃದ್ಧಿ, ಉತ್ತಮ ಮಳೆ, ಬೆಳೆಯಾಗಲೆಂದು ಪ್ರಾರ್ಥನೆ

ಕರ್ನಾಟಕದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದು ಹಾಗೂ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದ ಆದೇಶದ ವಿರುದ್ಧ “ಕರ್ನಾಟಕ ಬಂದ್” ಕರೆ ನೀಡಿರುವುದಾಗಿ ತಿಳಿದು ಬಂದಿದೆ. ಆದರೆ ದಾವಣಗೆರೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಂದ್ ಕರೆ ನೀಡಿದ ಆಯೋಜಕರಿಗೆ Davanagere  ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದೆ.

ಬಂದ್ ಕರೆ ಸಂಬಂಧ ಸವೋರ್ಚ್ಚ ನ್ಯಾಯಾಲಯದ ಆದೇಶಗಳ ಉಲ್ಲಂಘನೆಯಾಗಬಾರದು. ಒತ್ತಾಯ ಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ, ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮ ವಹಿಸಲಾಗುವುದು.

ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ. ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು. ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ. ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಟೈರ್ ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶ ಇಲ್ಲ. ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದಾಗಿ ಎಚ್ಚರಿಕೆ ಕೊಡಲಾಗಿದೆ.

ಬಂದ್ ಸಂಬಂಧ ಸುಳ್ಳು ವದಂತಿ ಹಬ್ಬಿಸುವವರ ಮೇಲೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶ ಅಥವಾ ಪೋಸ್ಟರ್‌ಗಳನ್ನು ಹಾಕುವವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸ್ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಕೆ ಕೊಟ್ಟಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment