SUDDIKSHANA KANNADA NEWS/ DAVANAGERE/ DATE-28-06-2025
ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ, ವಸತಿ ಹಂಚಿಕೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇಕಡಾ 15ರಷ್ಟು ಮೀಸಲಾತಿ ಹೆಚ್ಚಳ, ವಿದೇಶ ಉನ್ನತ ವ್ಯಾಸಂಗಕ್ಕೆ ಸಹಾಯಧನ ಹೆಚ್ಚಳ ಸೇರಿದಂತೆ ಹಲವು ಪ್ರಯೋಜನಗಳನ್ನು ಪಡೆದಿದ್ದ ಮುಸ್ಲಿಂ ಮುಖಂಡರು ಈಗ ಹೊಸದೊಂದು ಬೇಡಿಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಮುಸ್ಲಿಂರ ಓಲೈಕೆ ಹೆಚ್ಚಾಗುತ್ತಿದೆ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ಬಜೆಟ್ ನಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನ, ಯೋಜನೆ ಘೋಷಿಸುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಿರ್ಧಾರಗಳು ಮುಸ್ಲಿಂರ ಪರ. ಇದು ಮತ ತುಷ್ಟೀಕರಣದ ಪರಮಾವಧಿ ಎಂದು ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಆರೋಪ ಮಾಡಿದ್ದವು. ಆದ್ರೆ, ಈಗ ಮತ್ತೆ ರಾಜಕೀಯ ಪ್ರಾತಿನಿಧ್ಯಕ್ಕೆ ಮುಸ್ಲಿಂ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿ ಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.
ನಿಗಮ – ಮಂಡಳಿ ಹಾಗೂ ಪರಿಷತ್ ನಾಮಕರಣ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರಾತಿನಿದ್ಯ ಕಲ್ಪಿಸಲು ಮನವಿ ಸಲ್ಲಿಸಿತು.
ಈ ವೇಳೆ ಸಚಿವ ರಹೀಮ್ ಖಾನ್, ಮಾಜಿ ಸಚಿವ ತನ್ವಿರ್ ಸೇಠ್, ಬಿಡಿಎ ಅಧ್ಯಕ್ಷ ಹ್ಯಾರಿಸ್, ಶಾಸಕ ಆರ್ಷದ್ ರಿಜ್ವಾನ್, ಮನ್ಸೂರ್ ಅಲಿ ಖಾನ್ ಉಪಸ್ಥಿತರಿದ್ದರು.