- ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ಯಾಕೆ…?
ದಾವಣಗೆರೆ:ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಾಜಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ಅವರು ಮತದಾನದ ವೇಳೆ ನೆನಪಾಗದಿರುವುದೇ ಬೇಸರ ಎಂದು ಎಸ್. ಎಸ್. ಮಲ್ಲಿಕಾರ್ಜುನ್ ರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ (PRABHA MALLIKARJUN) ಹೇಳಿದರು.
ದಾವಣಗೆರೆ (DAVANAGERE) ಉತ್ತರ ವಿಧಾನಸಭಾ ಕ್ಷೇತ್ರದ ಸೆಂಟ್ ಜಾನ್ಸ್ ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಅಭಿವೃದ್ಧಿಯ ವಿಷಯ ಬಂದಾಗ ಎಲ್ಲರೂ ಮಲ್ಲಿಕಾರ್ಜುನ್ ರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಾರೆ. ಆದ್ರೆ ಮತದಾನದ ವೇಳೆ ಮರೆತುಬಿಡುತ್ತಾರೆ ಎಂದರು.
ತಾವು ಯಾವುದೇ ಗಾಳಿಸುದ್ದಿಗೆ ಕಿವಿ ಕೊಡಬಾರದು, ಮಲ್ಲಿಕಾರ್ಜುನ್ ಅವರು ಕ್ಷೇತ್ರದ ಜನರ ಜೊತೆ ಸದಾ ಇರುತ್ತಾರೆ. ಕ್ಷೇತ್ರದ ಅಭಿವೃದ್ಧಿಯೇ ಅವರ ಮೂಲ ಉದ್ದೇಶವಾಗಿದ್ದು, ನೀವು ಮತ್ತೆ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಅತಿಹೆಚ್ಚಿನ ಮತಗಳ ಅಂತರದ ಮೂಲಕ ಗೆಲ್ಲಿಸಿ. ಕ್ಷೇತ್ರದಲ್ಲಿ ನಿಂತಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಬೆಂಬಲವಾಗಿರಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತುರ್ಚಘಟ್ಟದ ಬಸವರಾಜಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾಭಾಯಿ ಮಾಲತೇಶ್ ಮಾತನಾಡಿದರು. ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್, ಆರ್. ಎಚ್. ನಾಗಭೂಷಣ್, ನೀಲಕಂಠಪ್ಪ, ಲಕ್ಷ್ಮೀದೇವಿ, ವೆಂಕಟೇಶ್ ನಾಯ್ಕ್, ಶಿವಣ್ಣ, ರಾಜೇಶ್ವರಿ, ಮಂಗಳಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.