ದಾವಣಗೆರೆ: ಕರ್ನಾಟಕ ರಾಜ್ಯ ಶಾಲಾಶಿಕ್ಷಣಇಲಾಖೆ ಬೆಂಗಳೂರು ಹಾಗೂ ಬೀದರ್ ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೃಷ್ಠಿ ಕೆ. ವೈ ಸಾಂಪ್ರಾದಾಯಿಕ ಯೋಗಾಸನ ಹಾಗು ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ಮೂಲಕ ದಾವಣಗೆರೆ ಜಿಲ್ಲೆಗೆ ಹಾಗು ಸಿದ್ಧಗಂಗಾ ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ, ಇವರ ಸಾಧನೆಗೆ ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿʼಸೌಜ , ಸಂಸ್ಥೆಯ ಕಾರ್ಯದರ್ಶಿಗಳಾದ ಹೇಮಂತ್, ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ನಿರ್ದೆಶಕಾರದ ಡಾ|| ಜಯಂತ್, ಪ್ರಾಂಶುಪಾಲರಾದ ವಾಣಿಶ್ರೀ ಹಾಗು ಉಪನ್ಯಾಸಕ ವೃಂದದವರು ಅಭಿನಂದನೆ
ಸಲ್ಲಿಸಿದರು.
ದ್ವಿಪಟ್ಟು ಸಾಧನೆ: ಸೃಷ್ಠಿ ಕೆ.ವೈ. ಅವರು ಸಾಂಪ್ರದಾಯಿಕ ಯೋಗಾಸನ ಹಾಗೂ ಕಲಾತ್ಮಕ ಯೋಗಾಸನ ಎರಡೂ ವಿಭಾಗಗಳಲ್ಲಿಯೂ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಪ್ರತಿಭೆ ಮೆರೆದಿದ್ದಾರೆ.
ಸಂಸ್ಥೆಗೆ ಕೀರ್ತಿ: ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ದಾವಣಗೆರೆ ಜಿಲ್ಲೆ ಮತ್ತು ಸಿದ್ಧಗಂಗಾ ವಿದ್ಯಾಸಂಸ್ಥೆಯ ಹೆಸರನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದ್ದಾರೆ.
ಗಣ್ಯರಿಂದ ಅಭಿನಂದನೆ: ಕಾಲೇಜಿನ ಪ್ರಾಚಾರ್ಯರು, ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಯಶಸ್ವಿ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.





Leave a comment