ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

On: July 7, 2025 10:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE_07-07_2025

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿತ್ತು. ಈಗ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, (ಅರಿವು ಶೈಕ್ಷಣಕ ಸಾಲ ಯೋಜನೆ ನವೀಕರಣ), ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ), ಮರಾಠ
ಮಿಲ್ಟ್ರೀ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಮರಾಠ ಸಮುದಾಯದ ಜನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿಸಿರಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. 2023-24 ಮತ್ತು 2024-25 ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಜುಲೈ 4 ರಿಂದ ಜುಲೈ 10 ರವರೆಗೆ ವಿಸ್ತರಿಸಲಾಗಿದೆ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ).

ಹೆಚ್ಚಿನ ಮಾಹಿತಿಗಾಗಿ https://kmcdc.karnataka.gov.in ಹಾಗೂ ನಿಗಮದ ಸಹಾಯವಾಣಿ 08182-229634, ಮೊ.ನಂ. 8867537799 ದೂ.ಸಂ.080-29903994 ಗಳನ್ನು ಸಂಪರ್ಕಿಸಬಹುದು ಎಂದು
ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment