ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ: ಬೈಕ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ: ಯಾವೆಲ್ಲಾ ದಾಖಲಾತಿ ಬೇಕು?

On: July 17, 2025 8:57 AM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/ DATE:17_07_2025

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯಿಂದ ಬೈಕ್ ರಿಪೇರಿ ಮತ್ತು ಸರ್ವೀಸ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 4 ರಿಂದ ಆರಂಭವಾಗಲಿದ್ದು ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಜುಲೈ 28 ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ದಾವಣಗೆರೆಯಲ್ಲಿ ಗಾಂಜಾ, ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ: ಇಬ್ಬರ ಬಂಧನ!

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ
ಹೊಂದಿರಬೇಕು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.——

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment