ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೂಡಲ ಸಂಗಮ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ದಾಖಲಾಗಿದ್ದೇಕೆ? ವಿವಾದವೇ ಕಾರಣನಾ?

On: July 19, 2025 1:37 PM
Follow Us:
ಕೂಡಲ ಸಂಗಮ
---Advertisement---

SUDDIKSHANA KANNADA NEWS/ DAVANAGERE/ DATE:19_07_2025

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಬಾಗಲಕೋಟೆಯ ಕೆರೋಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

READ ALSO THIS STORY: ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಕ್ರಮಗಳೇನು..?

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೂಡಲಸಂಗಮದಲ್ಲಿನ ಮಠಕ್ಕೆ ಬೀಗ ಹಾಕಲಾಗಿತ್ತು. ಈ ವಿವಾದ ಭುಗಿಲೆದ್ದಿತ್ತು. ಶಾಸಕ ವಿಜಯಾನಂದ ಕಾಶಪ್ಪನವರ್ ಆದೇಶದ ಮೇಲೆಗೆ ಬೀಗ ಹಾಕುವ ಕೆಲಸ ನಡೆದಿತ್ತು. ಇದು ಜಯಮೃತ್ಯುಂಜಯ ಸ್ವಾಮೀಜಿ ಅವರು ಕಣ್ಣೀರು ಸುರಿಸಿದ್ದರು. ಪಂಚಮಸಾಲಿ ಸಮಾಜದ ಏಳಿಗೆ, ಪ್ರಗತಿ, 2ಎ ಮೀಸಲಾತಿಗೆ ಹೋರಾಟ ನಡೆಸಿದ್ದ ಶ್ರೀಗಳ ಹೋರಾಟ ಕುಂದಿಸಲು ಈ ಷಡ್ಯಂತ್ರ ರೂಪಿಸಲಾಗಿತ್ತು ಎಂಬ ಆರೋಪವೂ ಕೇಳಿ ಬಂದಿತ್ತು.

ಆದ್ರೆ, ಶ್ರೀಗಳ ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿದ್ದು, ವಾಂತಿ, ಎದೆನೋವು, ಶೀತ, ತಲೆನೋವು ಕಾಣಿಸಿಕೊಂಡಿತ್ತು. ಮಠಕ್ಕೆ ಬೀಗ ಹಾಕಿದ್ದರಿಂದ ಶ್ರೀಗಳ ಮನಸ್ಸಿಗೆ ಘಾಸಿಯಾಗಿತ್ತು. ಹಾಗಾಗಿ, ಎದೆನೋವು ಕಾಣಿಸಿಕೊಂಡಿದೆ
ಎಂದು ಶ್ರೀಗಳ ಆಪ್ತರು ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲಿರುವ ಶ್ರೀಗಳು ಕುಂದಿದ್ದು, ಸ್ವಾಮೀಜಿ ಅವರನ್ನು ಬಾಗಲಕೋಟೆ ಕೆರೂಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಸ್ವಾಮೀಜಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ
ಶ್ರೀಗಳು ನಡೆದುಕೊಂಡೇ ಹೋಗಿರುವುದು ಗೊತ್ತಾಗಿದೆ.

ಕೂಡಲ ಸಂಗಮ ಶ್ರೀಗಳಿಗೆ ಫುಡ್ ಫಾಯಿಸನ್!

ಇನ್ನು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸ್ಪಷ್ಟನೆಯನ್ನೂ ನೀಡಿದ್ದು, ಕಲಬುರ್ಗಿ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಮಲ್ಲನಗೌಡರು ಮಾಹಿತಿ ನೀಡಿದ್ದು, ಸ್ವಾಮೀಜಿಗೆ ಫುಡ್ ಫಾಯಿಸನ್ ಆಗಿತ್ತು. ವೈದ್ಯರಿಗೆ ಕೇಳಿ ಮಾತ್ರೆ ತೆಗೆದುಕೊಂಡಿದ್ದರು. ಆದ್ರೆ, ರಾತ್ರಿ ಸ್ವಲ್ಪ ಚೇತರಿಸಿಕೊಂಡರೂ ಬೆಳಿಗ್ಗೆ ವಾಂತಿ, ತಲೆನೋವು, ಎದೆನೋವು ಹೆಚ್ಚಾಯಿತು. ಈ ಕಾರಣದಿಂದ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಕ್ತರು ಪ್ರಾರ್ಥಿಸಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment