ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನ್‌ಸ್ಟೇಬಲ್‌ಗೆ ನೀಡಲಾದ ‘ಕಸ್ಟಡಿ ಚಿತ್ರಹಿಂಸೆ’ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಈ ಸುದ್ದಿಯನ್ನೂ ಓದಿ: 2006ರ ಮುಂಬೈ ರೈಲು ಸ್ಫೋಟಗಳು: ಮರಣದಂಡನೆ ಶಿಕ್ಷೆಗೆ ಗುರಿಯಾದ ಐವರು ಸೇರಿ 12 ಅಪರಾಧಿಗಳು ಖುಲಾಸೆ!
ಕುಪ್ವಾರಾ ವಿಚಾರಣಾ ಕೇಂದ್ರದಲ್ಲಿ ಕಸ್ಟಡಿಯಲ್ಲಿದ್ದಾಗ ಕಾನ್ ಸ್ಟೇಬಲ್ ನನ್ನು ಕ್ರೂರವಾಗಿ ಹಿಂಸಿಸಿ ಅಂಗವಿಕಲಗೊಳಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಕುಪ್ವಾರಾದ ಜಂಟಿ ವಿಚಾರಣಾ ಕೇಂದ್ರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಕಾನ್‌ಸ್ಟೆಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐ ತನಿಖೆಗೆ ಆದೇಶಿಸಿದೆಯಲ್ಲದೇ, ಕಾನ್‌ಸ್ಟೇಬಲ್‌ಗೆ 50 ಲಕ್ಷ ರೂ. ಪರಿಹಾರವನ್ನು ನೀಡುವಂತೆ ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನಿರ್ದೇಶನ ನೀಡಿದೆ.
ಸೆಪ್ಟೆಂಬರ್ ಒಳಗೆ ತನಿಖೆಯ ಸ್ಥಿತಿ ವರದಿಯನ್ನು ಸಲ್ಲಿಸುವಂತೆಯೂ ನ್ಯಾಯಾಲಯ ಕೋರಿದೆ. ಕುಪ್ವಾರಾ ವಿಚಾರಣಾ ಕೇಂದ್ರದಲ್ಲಿ ಕಸ್ಟಡಿಯಲ್ಲಿದ್ದಾಗ ತಮ್ಮನ್ನು ಕ್ರೂರವಾಗಿ ಹಿಂಸಿಸಿ ಅಂಗವಿಕಲಗೊಳಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅರ್ಜಿಯಲ್ಲಿ ಕೋರಲಾಗಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಸಿಬಿಐ ತನಿಖೆ ನಡೆಸುವಂತೆ ಕೋರಲಾಗಿದೆ.
ಐಪಿಸಿ ಸೆಕ್ಷನ್ 309 ರ ಅಡಿಯಲ್ಲಿ ಕುಪ್ವಾರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ. ಈ ವರ್ಷದ ಆರಂಭದಲ್ಲಿ, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಮತ್ತೊಂದು ಪ್ರಕರಣ ಜಮ್ಮು ಮತ್ತು ಕಾಶ್ಮೀರವನ್ನು ಬೆಚ್ಚಿಬೀಳಿಸಿದೆ. ಫೆಬ್ರವರಿಯಲ್ಲಿ ಕಥುವಾದ ಬಿಲ್ಲಾವರ್ ಪ್ರದೇಶದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಅನುಭವಿಸಿದ ನಂತರ ಗುಜ್ಜರ್ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿತ್ತು.