SUDDIKSHANA KANNADA NEWS/ DAVANAGERE/ DATE:04-10-2023
ಬೆಂಗಳೂರು: ಮುಂದಿನ ಐದು ದಿನಗಳ ಕಾಲ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read Also This Story:
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು, ಹೋರಾಟಕ್ಕಿಳಿದರೆ ಸರ್ಕಾರ ಕರೆದು ಮಾತನಾಡುತ್ತೆ: ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀ ಎಚ್ಚರಿಕೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸದ್ಯ ಉತ್ತಮ ಮಳೆ (Rain) ಸುರಿಯುತ್ತಿದ್ದು, ರಾಜ್ಯದಲ್ಲಿ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ತಿಳಿಸಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ, ಕದ್ರಾ, ಮಂಕಿಯಲ್ಲಿ ಮಳೆ(Rain)ಯಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ (Rain) ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಹಾವೇರಿ, ಕಲಬುರಗಿ, ರಾಯಚೂರು, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆ(Rain)ಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.,
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.