Home ದಾವಣಗೆರೆ ನಗರ ಸ್ಥಳೀಯ ಸಂಸ್ಥೆಗಳ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಡಿ ತರಲು ‘POURSEVE’ URBAN ERP ಸೂಟ್: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ದಾವಣಗೆರೆನವದೆಹಲಿಬೆಂಗಳೂರು

ನಗರ ಸ್ಥಳೀಯ ಸಂಸ್ಥೆಗಳ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಡಿ ತರಲು ‘POURSEVE’ URBAN ERP ಸೂಟ್: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Share
ಸ್ಥಳೀಯ ಸಂಸ್ಥೆ
Share

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ, ಪರಿಣಾಮಕಾರಿ, ಜನಸ್ನೇಹಿ ಹಾಗೂ ತಂತ್ರಜ್ಞಾನ ಆಧಾರಿತವಾಗಿಸುವ ಉದ್ದೇಶದಿಂದ ‘POURSEVE’ URBAN ERP ಸೂಟ್ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಪರಿಶೀಲಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಗೃಹ ಕಚೇರಿಯಲ್ಲಿ ಇಂದು Seminal Software ಸಂಸ್ಥೆಯು ಪ್ರಸ್ತುತಪಡಿಸಿದ ‘POURSEVE’ URBAN ERP ಸೂಟ್ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಅದರ ಕಾರ್ಯವೈಖರಿ ಹಾಗೂ ಅನುಷ್ಠಾನದ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಮಗ್ರ ಡಿಜಿಟಲ್ ವ್ಯವಸ್ಥೆಯು ಆಸ್ತಿ ತೆರಿಗೆ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆ, ವ್ಯಾಪಾರ ಪರವಾನಗಿ, ಮಾರುಕಟ್ಟೆ ಮತ್ತು ಮಳಿಗೆಗಳ ಬಾಡಿಗೆ ನಿರ್ವಹಣೆ, ಆನ್‌ಲೈನ್ ಪಾವತಿ, ಸಾರ್ವಜನಿಕ ಕುಂದುಕೊರತೆಗಳ ಪರಿಹಾರ, ಘನತ್ಯಾಜ್ಯ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಪ್ರಮುಖ ಸೇವೆಗಳನ್ನು ಒಂದೇ ವೇದಿಕೆಯಡಿ ಒದಗಿಸುವ ಉದ್ದೇಶ ಹೊಂದಿದೆ.

ಕೃತಕ ಬುದ್ಧಿಮತ್ತೆ (AI), GIS ತಂತ್ರಜ್ಞಾನ, ಡಿಜಿಟಲ್ ದಾಖಲೆಗಳ ನಿರ್ವಹಣೆ, ರಿಯಲ್‌ಟೈಮ್ ಡ್ಯಾಶ್‌ಬೋರ್ಡ್ ಹಾಗೂ ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಮೂಲಕ ನಗರಾಡಳಿತದ ಕಾರ್ಯವೈಖರಿಯಲ್ಲಿ ವೇಗ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಈಗಾಗಲೇ ನಗರಾಭಿವೃದ್ಧಿ ಇಲಾಖೆಯಲ್ಲಿ ಅಭಿವೃದ್ಧಿಪಡಿಸಿರುವ ಡಿಜಿಟಲ್ ವ್ಯವಸ್ಥೆಗಳ ಪುನರಾವರ್ತನೆಗೆ ಅವಕಾಶ ನೀಡದೆ, ಅಸ್ತಿತ್ವದಲ್ಲಿರುವ ಉತ್ತಮ ತಂತ್ರಾಂಶಗಳನ್ನು ಹೊಸ ವ್ಯವಸ್ಥೆಯೊಂದಿಗೆ ಸಮನ್ವಯಗೊಳಿಸುವ ಅಗತ್ಯವಿದೆ. ಅಲ್ಲದೆ, ತಂತ್ರಾಂಶದ ಸಂಪೂರ್ಣ ಸೋರ್ಸ್ ಕೋಡ್ ಅನ್ನು ಇಲಾಖೆಗೆ ಹಸ್ತಾಂತರಿಸುವುದು ಅಗತ್ಯ ತಾಂತ್ರಿಕ ನೆರವು ಒದಗಿಸುವ ಕುರಿತು ಪ್ರಸ್ತಾವನೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ದೊರೆಯುವ ಸೇವೆಗಳನ್ನು ಮತ್ತಷ್ಟು ಸರಳಗೊಳಿಸುವುದು ನಮ್ಮ ಆದ್ಯತೆಯಾಗಿದೆ. ತಂತ್ರಜ್ಞಾನದ ಸಮರ್ಪಕ ಬಳಕೆಯ ಮೂಲಕ ನಾಗರಿಕರು ಸರ್ಕಾರಿ ಸೇವೆಗಳನ್ನು ಸುಲಭವಾಗಿ, ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಪಡೆದುಕೊಳ್ಳುವ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಮತಿ ಶೈಲಾ ಕೆ.ಡಿ., Seminal Software ಸಂಸ್ಥೆಯ ಪ್ರತಿನಿಧಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Recent Posts

Recent Comments

No comments to show.
Related Articles