Home ದಾವಣಗೆರೆ ತಿರುಪ್ಪರಂಕುಂಡ್ರಂ ಕಾರ್ತೀಕ ದೀಪೋತ್ಸವ ವಿವಾದ: ಸುಪ್ರೀಂ ಕೋರ್ಟ್ ಆದೇಶ ಮೀರಿ ಸಾಂಪ್ರದಾಯಿಕ ಸ್ಥಳದಲ್ಲೇ ದೀಪ ಬೆಳಗಿದ ತಮಿಳುನಾಡು ಸರ್ಕಾರ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ತಿರುಪ್ಪರಂಕುಂಡ್ರಂ ಕಾರ್ತೀಕ ದೀಪೋತ್ಸವ ವಿವಾದ: ಸುಪ್ರೀಂ ಕೋರ್ಟ್ ಆದೇಶ ಮೀರಿ ಸಾಂಪ್ರದಾಯಿಕ ಸ್ಥಳದಲ್ಲೇ ದೀಪ ಬೆಳಗಿದ ತಮಿಳುನಾಡು ಸರ್ಕಾರ!

Share
ತಿರುಪ್ಪರಂಕುಂಡ್ರಂ
Share

ಮಧುರೈ: ತಮಿಳುನಾಡಿನ ಮಧುರೈನ ತಿರುಪ್ಪರಂಕುಂಡ್ರಂ ಬೆಟ್ಟದಲ್ಲಿರುವ ವಿವಾದಿತ ದೀಪಸ್ತೂಣ (Deepathoon) ಮೇಲೆ ಕಾರ್ತೀಕ ದೀಪ ಹಚ್ಚಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರೂ, ಅದನ್ನು ಧಿಕ್ಕರಿಸಿ ಎಂದಿನಂತೆ ಸಾಂಪ್ರದಾಯಿಕ ಉಚ್ಚಿಪಿಳ್ಳೈಯಾರ್ ಮಂಟಪದಲ್ಲೇ ದೀಪ ಬೆಳಗಲಾಗಿದೆ.

ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಉಲ್ಲಂಘಿಸಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದುಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹಜರತ್ ಸುಲ್ತಾನ್ ಸಿಕಂದರ್ ಬಾದೂಷಾ ಔಲಿಯಾ ದರ್ಗಾದ ಸಮೀಪವಿರುವ ವಿವಾದಿತ ದೀಪಸ್ತೂಣದಲ್ಲಿ ದೀಪ ಹಚ್ಚುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನವೆಂಬರ್ 20 ರಂದು ಒಂದು ಬಾರಿಯ ಮಧ್ಯಂತರ ವ್ಯವಸ್ಥೆಯಾಗಿ ಅಲ್ಲಿ ದೀಪ ಹಚ್ಚಲು ಅನುಮತಿ ನೀಡಿತ್ತು. ಆದರೆ ಇದಕ್ಕೆ ತಮಿಳುನಾಡು ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಮದ್ರಾಸ್ ಹೈಕೋರ್ಟ್ ಕೂಡ ಸುಪ್ರೀಂ ಕೋರ್ಟ್ ಆದೇಶ ಪಾಲಿಸುವಂತೆ ಸೂಚಿಸಿದ್ದರೂ, ಅಂತಿಮವಾಗಿ ಜಿಲ್ಲಾ ಆಡಳಿತವು ಎಂದಿನಂತೆ ಉಚ್ಚಿಪಿಳ್ಳೈಯಾರ್ ಮಂಟಪದಲ್ಲೇ ದೀಪ ಬೆಳಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ: ವಿವಾದಿತ ದೀಪಸ್ತೂಣದಲ್ಲಿ ದೀಪ ಹಚ್ಚಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದ್ದರೂ, ಮುನ್ನೆಚ್ಚರಿಕೆ ಹಾಗೂ ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ತಮಿಳುನಾಡು ಸರ್ಕಾರ ಸಾಂಪ್ರದಾಯಿಕ ಸ್ಥಳದಲ್ಲೇ ದೀಪ ಬೆಳಗಿದೆ.

ಬಿಗಿ ಭದ್ರತೆ ಹಾಗೂ ನಾಯಕರ ಬಂಧನ: ತಿರುಪ್ಪರಂಕುಂಡ್ರಂ ಸುತ್ತಮುತ್ತ 5,600ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿಭಟನೆಗೆ ಯತ್ನಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸೇರಿದಂತೆ ಹಲವು ಹಿಂದುಪರ ಮುಖಂಡರನ್ನು ಗೃಹಬಂಧನದಲ್ಲಿರಿಸಲಾಗಿದೆ ಹಾಗೂ ವಶಕ್ಕೆ ಪಡೆಯಲಾಗಿದೆ.

ನ್ಯಾಯಾಲಯದ ನಿರ್ದೇಶನ: ಸುಪ್ರೀಂ ಕೋರ್ಟ್ ಆದೇಶದ ಪಾಲನೆಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಸೂಚನೆ ನೀಡಿದ್ದರೂ, ದೀಪಸ್ತೂಣದಲ್ಲಿ ದೀಪ ಬೆಳಗದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Share

Recent Posts

Recent Comments

No comments to show.
Related Articles