
ಮೈಸೂರು: ಸಂವಿಧಾನ ದಿನದ ಸಂದರ್ಭದಲ್ಲಿ ಮೈಸೂರಿನ ಮಹಾರಾಜ ಗ್ರೌಂಡ್‌ನಲ್ಲಿ ಸಮಾರಂಭ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆಗಳನ್ನು ಟೀಕಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಮುಕ್ತವಾದ 10 ಪ್ರಮುಖ ಪ್ರಶ್ನೆಗಳನ್ನುಕೇಳಿದ್ದು ಉತ್ತರಿಸುವಂತೆ ಆಗ್ರಹಿಸಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳು ಮತ್ತು ದಲಿತ ನಾಯಕರ ರಾಜಕೀಯ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ಈ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಂಬೇಡ್ಕರ್ ಗೌರವದ ಪ್ರಶ್ನೆ: ಸ್ವಾತಂತ್ರ್ಯದ ನಂತರದ ದೀರ್ಘ ಕಾಲದ ಕಾಂಗ್ರೆಸ್ ಆಡಳಿತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲು ಹಾಗೂ ಅವರ ಸ್ಮಾರಕಗಳನ್ನು ನಿರ್ಮಿಸಲು ಯಾಕೆ ನಿರ್ಲಕ್ಷ್ಯ ವಹಿಸಲಾಯಿತು ಎಂದು ಪ್ರಶ್ನಿಸಲಾಗಿದೆ.
ದಲಿತ ನಾಯಕರಿಗೆ ವಂಚನೆ ಆರೋಪ: ಹಿರಿಯ ದಲಿತ ನಾಯಕ ಜಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ತಪ್ಪಿಸಿದ್ದು ಮತ್ತು ಪ್ರಸ್ತುತ ಡಾ. ಮಹದೇವಪ್ಪ ಅವರಿಗೆ ಸಚಿವ ಸ್ಥಾನದ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಲಾಗಿದೆ.
ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನ: ದಲಿತ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್‌ಸಿಪಿ ಮತ್ತು ಟಿಎಸ್‌ಪಿ (SCP & TSP) ಅನುದಾನವನ್ನು ಬೇರೆಡೆಗೆ ಬಳಸಿ ಕೊಂಡಿರುವುದರ ಕುರಿತು ಖಡಕ್ ಪ್ರಶ್ನೆಗಳನ್ನು ಕೇಳಿದ್ದಾರೆ.




