ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಟಿಕೆಟ್ ದರ ಹೆಚ್ಚು ವಸೂಲಿ ಮಾಡಿದರೆ ಪರವಾನಗಿ ರದ್ದು: ಎಚ್ಚರಿಕೆ ಕೊಟ್ಟ ಜಿಲ್ಲಾಡಳಿತ!

On: August 5, 2025 9:00 AM
Follow Us:
Fare
---Advertisement---

SUDDIKSHANA KANNADA NEWS/ DAVANAGERE/DATE:05_08_2025

ದಾವಣಗೆರೆ: ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಪರಿಸ್ಥಿತಿ ಲಾಭ ಪಡೆಯಲು ಖಾಸಗಿ ಬಸ್ ಮಾಲೀಕರು ಟಿಕೆಟ್ ದರ ಹೆಚ್ಚಿಸಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

READ ALSO THIS STORY: ಖಾಸಗಿ ಕಂಪೆನಿಗೆ ಕಡಿಮೆ ಬೆಲೆಗೆ ಜಮೀನು ನೀಡಿರುವುದರ ಹಿಂದೆ ಸಚಿವ, ಸಂಸದರ ಕೈವಾಡ ಶಂಕೆ: ಯಶವಂತರಾವ್ ಜಾಧವ್ ಸ್ಫೋಟಕ ಆರೋಪ!

ಖಾಸಗಿ ಬಸ್‌ಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಟಿಕೆಟ್ ದರ ವಸೂಲಾತಿ ಮಾಡಿದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ದ ಸೂಕ್ತ ಕ್ರಮ ಅಥವಾ ಪರವಾನಗಿ ರದ್ದುಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ಎಚ್ಚರಿಸಿದ್ದಾರೆ.

ದಾವಣಗೆರೆ ನಗರ, ಹರಿಹರ, ಹೊನ್ನಾಳಿ, ಮಾಯಕೊಂಡ, ಚನ್ನಗಿರಿ, ಜಗಳೂರು ಸೇರಿದಂತೆ ನಗರ ಪಟ್ಟಣಗಳಲ್ಲಿ ಜನರು ಹೆಚ್ಚಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಾರೆ. ಹಳ್ಳಿಗಳಿಗೆ ಬೇರೆ ಬೇರೆ ಜಿಲ್ಲೆಗಳಿಗೂ ಹೋಗಲು ಕೆಎಸ್ಆರ್ ಟಿಸಿ ಬಸ್ ಗೆ ಹೋಗುತ್ತಿದ್ದರು. ನೌಕರರು ಮುಷ್ಕರ ಕೈಗೊಂಡಿರುವುದರಿಂದ ಅನಿವಾರ್ಯವಾಗಿ ಖಾಸಗಿ ಬಸ್ ಗಳನ್ನು ಹತ್ತಬೇಕಿದೆ. ಹಾಗಾಗಿ, ಖಾಸಗಿ ಬಸ್ ಮಾಲೀಕರು ಈ ಹಿಂದೆ ಪಡೆಯುತ್ತಿದ್ದ ಟಿಕೆಟ್ ದರವನ್ನೇ ಮುಂದುವರಿಸಬೇಕು. ಹೆಚ್ಚಿನ ಹಣ ವಸೂಲಿಗೆ ಮುಂದಾದರೆ ಜನರು ದೂರು ನೀಡಬಹುದು ಎಂದು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment