ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ”: ಟ್ರಂಪ್ ಸುಂಕ ಜಾರಿಗೆ ಬರುತ್ತಿದ್ದಂತೆ ನರೇಂದ್ರ ಮೋದಿ ಖಡಕ್ ಸಂದೇಶ!

On: August 7, 2025 10:20 AM
Follow Us:
ನರೇಂದ್ರ ಮೋದಿ
---Advertisement---

SUDDIKSHANA KANNADA NEWS/ DAVANAGERE/DATE:07_08_2025

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಸಂದೇಶ ರವಾನಿಸಿದ್ದಾರೆ.

READ ALSO THIS STORY: ಮದುವೆ, ಪ್ರಣಯ, ಗರ್ಭಪಾತ, ಹಲ್ಲೆ: 5 ತಿಂಗಳ ಚಿತ್ರಹಿಂಸೆ ಬಳಿಕ ವಿವಾಹಿತೆ ಸಾವು! ಎಂಥ ಕ್ರೂರಿ ಗೊತ್ತಾ ಈ ಪತಿ?

ಭಾರತ ತನ್ನ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

“ತಾವು ಬೆಲೆ ತೆರಬೇಕಾಗುತ್ತದೆ” ಎಂದು ತಿಳಿದಿದ್ದರೂ, ರೈತರ ರಕ್ಷಣೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಮತ್ತು ಇದಕ್ಕಾಗಿ ನಾನು ವೈಯಕ್ತಿಕವಾಗಿ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ, ಆದರೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಸಿದ್ಧವಾಗಿದೆ” ಎಂದು ಟ್ರಂಪ್ ಅವರ ಸುಂಕಗಳು ಜಾರಿಗೆ ಬಂದ ಸ್ವಲ್ಪ ಸಮಯದ ನಂತರ ಪ್ರಧಾನಿ ಹೇಳಿದ್ದು, ಈ ಮೂಲಕ ಅಮೆರಿಕಕ್ಕೆ ತಿರುಗೇಟು ನೀಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment