SUDDIKSHANA KANNADA NEWS/ DAVANAGERE/DATE:11_08_2025
ದಾವಣಗೆರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಶ್ರೀ ಸಿದ್ಧಗಂಗಾ ಸ್ಥಳೀಯ ಸಂಸ್ಥೆಯು ಬೆಂಗಳೂರಿನಿಂದ ಬೆಳಗಾವಿಗೆ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ಟ್ರೈನ್ ಅನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು. ಈ ನಿಮಿತ್ತ ದಾವಣಗೆರೆ ರೈಲು ನಿಲ್ದಾಣದಲ್ಲಿ ನೂತನ ಕಾರ್ಯವೈಖರಿಯುಳ್ಳ ರೈಲನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
READ ALSO THIS STORY: BIG BREAKING: ರಾಹುಲ್ ಗಾಂಧಿ ಆರೋಪದ ‘ಮತ ಕಳ್ಳತನ’ ವಿರುದ್ಧ ಮಾತನಾಡಿದ್ದ ಸಚಿವ ಕೆ. ಎನ್. ರಾಜಣ್ಣ ತಲೆದಂಡ: ರಾಜೀನಾಮೆ ಅಂಗೀಕರಿಸಿದ ಸಿಎಂ!
ಶ್ರೀ ಸಿದ್ಧಗಂಗಾ ಸ್ಥಳೀಯ ಸಂಸ್ಥೆಯ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ನೃತ್ಯ,ಹಾಗೂ ನೈರುತ್ಯ ರೈಲ್ವೆ ವಿಭಾಗದಿಂದ ಆಯೋಜಿಸಿದ್ದ ಚಿತ್ರಕಲಾ, ಭಾಷಣ,ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಸಿದ್ಧಗಂಗಾ ಶಾಲೆಯ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರಿಂದ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದು ಪ್ರಶಸ್ತಿ ಪತ್ರ ಹಾಗೂ ಬಹುಮಾನ ಪಡೆದರು.
ದಾವಣಗೆರೆಯಿಂದ ಹಾವೇರಿಯ ತನಕ ನೂತನ ವಂದೇಭಾರತ್ ರೈಲಿನಲ್ಲಿ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಪ್ರಯಾಣಿಸಿ ಪುಳಕಗೊಂಡರು. ಸ್ಥಳೀಯ ಸಂಸ್ಥೆಯ 105 ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.