ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಮಾಧ್ಯಮಗಳಿಗೆ ಕಣ್ತಪ್ಪಿಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಬಂಧನ!

On: August 14, 2025 4:17 PM
Follow Us:
ದರ್ಶನ್ ತೂಗುದೀಪ್
---Advertisement---

SUDDIKSHANA KANNADA NEWS/ DAVANAGERE/DATE:14_08_2025

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಬಂಧನಕ್ಕೊಳಗಾಗಿದ್ದಾರೆ.

READ ALSO THIS STORY: “ಕಾನೂನಿಗೆ ಮೀರಿದವರು ಯಾರೂ ಇಲ್ಲ”: ನಟ ದರ್ಶನ್ ಕೇಸ್ ನಲ್ಲಿ ಸುಪ್ರೀಂಕೋರ್ಟ್ ಏನೆಲ್ಲಾ ಹೇಳಿದೆ? ಕಂಪ್ಲೀಟ್ ಡೀಟೈಲ್ಸ್

ಹೊಸಕೆರೆಹಳ್ಳಿ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಿದ್ದಾರೆ. ಇನ್ನೋವಾ ಕಾರಿನಲ್ಲಿ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ ದರ್ಶನ್ ತೂಗುದೀಪ್ ಅವರನ್ನು ಬಂಧಿಸಿ ಕರೆದೊಯ್ಯಲಾಗುತ್ತಿದೆ.

ಕೊಲೆ ಪ್ರಕರಣದ ಆರೋಪಿ ಕನ್ನಡ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೂಡಲೇ ವಶಕ್ಕೆ ಪಡೆಯುವಂತೆ ಸುಪ್ರೀಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿತ್ತು. ಇನ್ ಸ್ಪೆಕ್ಟರ್ ಗಳಾದ  ನಾಗೇಶ್ ಹಾಗೂ ಸುಬ್ರಹ್ಮಣ್ಯ ಅವರು ದರ್ಶನ್ ತೂಗುದೀಪ್ ಅವರನ್ನು ಸೆರೆ ಹಿಡಿಯಲಾಗಿದೆ. ಮಾಧ್ಯಮಗಳ ಕಣ್ತಪ್ಪಿಸಿ ಓಡಾಡುತ್ತಿದ್ದ ದರ್ಶನ್ ತೂಗುದೀಪ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆ ಪ್ರಕರಣದಲ್ಲಿ ಕರ್ನಾಟಕದ ಹೈಕೋರ್ಟ್ ಪವಿತ್ರಾ ಗೌಡ, ದರ್ಶನ್ ತೂಗುದೀಪ್ ಸೇರಿ ಏಳು ಮಂದಿಗೆ ಜಾಮೀನು ನೀಡಿತ್ತು. ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಗೆ ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ಸುಪ್ರೀಂಕೋರ್ಟ್ ಹೈಕೋರ್ಟ್ ನೀಡಿದ್ದ ಜಾಮೀನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ಈ ಆದೇಶ ನೀಡಿತ್ತು.

ಜಾಮೀನು ತಿರಸ್ಕರಿಸಲು ಕಾರಣ?

ನಾವು ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ಪರಿಗಣಿಸಿದ್ದೇವೆ, ಮತ್ತು ಹೈಕೋರ್ಟ್ ಆದೇಶವು ಅಧಿಕಾರದ ಯಾಂತ್ರಿಕ ಪ್ರಯೋಗವನ್ನು ಪ್ರತಿಬಿಂಬಿಸುತ್ತದೆ ಎಂಬುದು ಸ್ಪಷ್ಟ. ಜಾಮೀನು ಮಂಜೂರು ವಿಚಾರಣೆ ಹಾಗೂ
ಸಾಕ್ಷಿಗಳ ಮೇಲೆ ಪರಿಣಾಮ ಬೀರುತ್ತದೆ. ಅಧಿಕಾರ, ದುಡ್ಡು, ಫೇಮು ನೇಮು ಸಾಕ್ಷಿಗಳ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವೂ ಕೇಳಿ ಬಂದಿತ್ತು. ಈ ಆಧಾರದ ಮೇಲೆ ಜಾಮೀನು ರದ್ದುಪಡಿಸಲಾಗಿದೆ ಎಂದು ನ್ಯಾಯಮೂರ್ತಿ ಮಹಾದೇವನ್ ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment