ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಜಾಥಾ

On: August 20, 2025 12:49 PM
Follow Us:
ಧರ್ಮಸ್ಥಳ
---Advertisement---

SUDDIKSHANA KANNADA NEWS/ DAVANAGERE/DATE:20_08_2025

ದಾವಣಗೆರೆ: ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳಕ್ಕೆ ಕಳಂಕ ತರುತ್ತಿರುವ ಹಾಗೂ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಭಕ್ತರ ಸಮಿತಿ ನೇತೃತ್ವದಲ್ಲಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಜೈಕಾರ ಹಾಕಿದರೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪರ ನಿಲ್ಲುವುದಾಗಿ ಘೋಷಿಸಿದರು.

READ ALSO THIS STORY: ಧರ್ಮಸ್ಥಳದ ಬಗ್ಗೆಅಪಪ್ರಚಾರ ಶುರುವಾಗಿದ್ದು ಯಾವಾಗಿನಿಂದ? ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಎಂದಿದ್ಯಾಕೆ ಡಾ. ವೀರೇಂದ್ರ ಹೆಗ್ಗಡೆ?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಗ್ಗೆ ನಿತ್ಯವೂ ಒಂದಲ್ಲಾ ಒಂದು ಆರೋಪ ಮಾಡಲಾಗುತ್ತಿದೆ. ಶ್ರೀ ಮಂಜುನಾಥ ಸ್ವಾಮಿ ನೆಲೆಸಿರುವ ಶ್ರದ್ಧಾ ಭಕ್ತಿ ತಾಣದ ಬಗ್ಗೆ ಅಪಪ್ರಚಾರ ಮುಂದುವರಿದಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ನಗರದ ಜಯದೇವ ವೃತ್ತದಿಂದ ಗಾಂಧಿ ವೃತ್ತ ತಲುಪಿ ಅಲ್ಲಿಂದ ಉಪವಿಭಾಗಾಧಿಕಾರಿಗಳ ಕಚೇರಿಯವರೆಗೆ ಜಾಥಾ ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳವು ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು. 800 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಕ್ಷೇತ್ರ ‘ದಕ್ಷಿಣ ಕಾಶಿ’ ಎಂದೇ ಕರೆಯಲಾಗುವ ಈ ದೇಗುಲಕ್ಕೆ ರಾಜ್ಯದಿಂದ ಮಾತ್ರವಲ್ಲ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಭಾರತದ ರಾಜ್ಯಗಳಿಂದಲೂ ಸಾವಿರಾರು ಭಕ್ತರು ನಿತ್ಯವೂ ಬರುತ್ತಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಆದ್ರೆ, ಕೆಲ ವರ್ಷಗಳಿಂದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಎಂ. ಡಿ. ಸಮೀರ್ ಸೇರಿದಂತೆ ಕೆಲ ಯುಟ್ಯೂಬರ್ ಗಳು ಮಂಜುನಾಥ ಸ್ವಾಮಿ ಹಾಗೂ ಡಿ. ವೀರೇಂದ್ರ ಹೆಗ್ಗಡೆ ಅವರ ಕುಟುಂಬಕ್ಕೆ ಕಳಂಕ ತರುವ ಮತ್ತು ಕೀಳುಮಟ್ಟದ ಭಾಷೆ ಉಪಯೋಗಿಸಿ ವಿಡಿಯೋ ತುಣುಕುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇವರ ವಿರುದ್ದ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಯಾವ ದಾಖಲೆಗಳು ಇಲ್ಲದಿದ್ದರೂ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀ ಕ್ಷೇತ್ರದ ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಯು ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿಭಂಗಕ್ಕೆ ಕಾರಣವಾಗಬಹುದು. ಹಾಗಾಗಿ, ಸರ್ಕಾರವು ಕೂಡಲೇ ಎಸ್ ಐಟಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರ ತರಬೇಕು ಎಂದು ಒತ್ತಾಯಿಸಿದರು.

ಮುಸುಕುಧಾರಿ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರಕಾರವು ‘ವಿಶೇಷ ತನಿಖಾ ತಂಡ’ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಶ್ರೀ ಕ್ಷೇತ್ರದ ಭಕ್ತವೃಂದದವರು ಸ್ವಾಗತಿಸಿದ್ದಾರೆ. ಆದರೆ ಈಗ ಮುಸುಕುಧಾರಿ ದೂರನ್ನೇ ಬಳಸಿಕೊಂಡು ಧರ್ಮಸ್ಥಳದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಬಿತ್ತರಿಸಿ ಭಕ್ತರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ವೃಂದದವರು ಜಾಥಾ ನಡೆಸಿದ ಬಳಿಕ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ದೂರು ನೀಡಲಿದ್ದೇವೆ. ಅಲ್ಲದೆ ಕ್ಷೇತ್ರದ ಗೌರವಕ್ಕೆ ಧಕ್ಕೆ ಬಾರದ ಹಾಗೆ ಕ್ಷೇತ್ರದ ರಕ್ಷಣೆಗೆ ನಾವು ಸದಾ
ಸಿದ್ಧರಿದ್ದೇವೆ ಎಂದು ಘೋಷಸಿದರು.

ಜಾಥಾದಲ್ಲಿ ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಸಮಿತಿಯ ಪ್ರಮುಖರಾದ ಅಣಬೇರು ಮಂಜುನಾಥ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಯಪ್ರಕಾಶ್ ಮಾಗಿ, ಸೋಗಿ ಶಾಂತಕುಮಾರ್, ಮಂಜುನಾಥ್ ಪಾಟೀಲ್, ಟಿಂಕರ್ ಮಂಜಣ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ, ಜೈನ ಸಮಾಜದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment