SUDDIKSHANA KANNADA NEWS/ DAVANAGERE/DATE:20_08_2025
ದಾವಣಗೆರೆ: ಬಿಳಿಚೋಡು ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಫೀಡರ್‍ಗಳ ಜಂಗಲ್ ಕಟಿಂಗ್ ಮತ್ತು ಫೀಡರ್ ಗಳ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 21 ಮತ್ತು 22 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೊಕ್ಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್‍ಜೆವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
READ ALSO THIS STORY: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಜಾಥಾ
ವಿದ್ಯುತ್ ವ್ಯತ್ಯಯ:
66/11 ಕೆ.ವಿ. ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತುರ್ತು ಕಾರ್ಯ ನಿರ್ವಾಹಣೆ ಹಮ್ಮಿಕೊಂಡಿರುವುದರಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.