ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ! ಏನದು?

On: August 24, 2025 1:37 PM
Follow Us:
ಅಡಿಕೆ
---Advertisement---

SUDDIKSHANA KANNADA NEWS/ DAVANAGERE/DATE:24_08_2025

ಬೆಂಗಳೂರು: ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು, ಬಿಜೆಪಿ ಸಂಸದರು ಧ್ವನಿ ಎತ್ತಿದ್ದು, ಈ ಸಂಬಂಧ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ರಾಜ್ಯದ ಬೇಡಿಕೆಗೆ ಕೇಂದ್ರ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

READ ALSO THIS STORY: ನನ್ನ ಕಣ್ಣುಂದೆ ಅಮ್ಮನ ಕಪಾಳಕ್ಕೆ ಹೊಡೆದು ಬೆಂಕಿ ಹಚ್ಚಿದರು: ಪುತ್ರ ಹೇಳಿದ ಭಯಾನಕತೆ!

ಸದ್ಯ 7% ಇರುವ ಅಡಿಕೆ ಮಾಯಿಷರ್ ಶೇಕಡಾ ದರ 11% ಗೆ ಹೆಚ್ಚಿಸುವುದು, ಅಡಿಕೆ ಮೇಲಿನ ಜಿಎಸ್‌ಟಿ ದರ ಹಾಗೂ ಫೈಬರ್ ದೋಟಿಯ ಕಸ್ಟಮ್ಸ್ ಸುಂಕ ಇಳಿಕೆ ಸೇರಿದಂತೆ ಹಲವು ಸಮಸ್ಯೆಗಳನ್ನು ಕೇಂದ್ರ ಕೃಷಿ ಸಚಿವರಿಗೆ ಮನವರಿಕೆ
ಮಾಡಲಾಗಿದೆ. ಸಮಸ್ಯೆಗಳನ್ನು ತ್ವರಿತವಾಗಿ‌ ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಡಿಕೆ ಬೆಳೆಗಾರರ ಹಿತ ಕಾಯಲು ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಕೃಷಿ ಸಚಿವರು ರಾಜ್ಯಕ್ಕೆ ಆಗಮಿಸಿ, ವಿಜ್ಞಾನಿಗಳ ಮೂಲಕ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗಿರುವುದು ಸ್ವಾಗತಾರ್ಹ ನಡೆಯಾಗಿದೆ.ಇದು ಅಡಿಕೆ ಬೆಳೆಗಾರರ ಖುಷಿಗೆ ಕಾರಣವಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment