SUDDIKSHANA KANNADA NEWS/ DAVANAGERE/DATE:25_08_2025
ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
READ ALSO THIS STORY: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ! ಏನದು?
ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ. ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳಲ್ಲಿ. 60ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿರುತ್ತದೆ ಎಂದು ಕೇಳಿದರು.
ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ. ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು? ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.