ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಸಮಾಜದ ಸ್ವಾಸ್ಥ್ಯ ಕೆಡಿಸುವವರ ಬಗ್ಗೆ ತಲೆಕೆಡಿಸಿಕೊಳ್ಳದೇ ಶಾಂತಿಯುತ ಗಣೇಶೋತ್ಸವ”: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹರ್ಷ

On: September 4, 2025 4:25 PM
Follow Us:
Prabha Mallikarjun
---Advertisement---

SUDDIKSHANA KANNADA NEWS/ DAVANAGERE/DATE:04_09_2025

ದಾವಣಗೆರೆ: ಸಮಾಜದ ಸ್ವಾಸ್ಥ್ಯ ಕೆಡಿಸುವವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಮಹತ್ವ ಕೊಡಬೇಡಿ. ಜಿಲ್ಲೆಯಾದ್ಯಂತ ಗಣೇಶ ಹಬ್ಬ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯು ಶಾಂತಿಯುತವಾಗಿ ನಡೆಯುತ್ತಿರುವುದು ಸಂತಸದ ವಿಚಾರ ಎಂದು ಲೋಕಸಭೆ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಹೇಳಿದರು.

READ ALSO THIS STORY: ಭಾರತದಲ್ಲಿ “ಪಾಪ ಸರಕುಗಳು” ಯಾವುವು? ಅತ್ಯಧಿಕ ಜಿಎಸ್‌ಟಿ ದರ ವಿಧಿಸಿದ್ದು ಏಕೆ?

ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ ಮುನ್ನ ಏರ್ಪಡಿಸಲಾಗಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ಪ್ರಸಾದ ಬಡಿಸುವ ಮೂಲಕ ಕಾರ್ಯಕ್ರಮಕ್ಕೆ ಅವರು ಚಾಲನೆ
ನೀಡಿದರು.

ಶ್ರದ್ಧಾ ಭಕ್ತಿಯಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಪೂಜೆ ಪುನಸ್ಕಾರವೂ ಜೋರಾಗಿ ನಡೆಯುತ್ತಿದೆ. ಗಣೇಶ ಮೂರ್ತಿ ಮೆರವಣಿಗೆಯು ಶಾಂತಿಯುತವಾಗಿ ಸಾಗಿ ವಿಸರ್ಜನೆ ನಡೆಯುತ್ತಿದ್ದು, ಇದು ದಾವಣಗೆರೆ ಜನರು ಶಾಂತಿಪ್ರಿಯರು ಎಂದು ತೋರಿಸುತ್ತದೆ. ಜಿಲ್ಲೆಯ ಜನರು, ಭಕ್ತಾದಿಗಳು ಯಾವುದೇ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

READ ALSO THIS STORY: ಶಾಮನೂರು ಕುಟುಂಬದ ಬಗ್ಗೆ ಬಿ. ಪಿ. ಹರೀಶ್ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ಗಡಿಗುಡಾಳ್ ಮಂಜುನಾಥ್ ಎಚ್ಚರಿಕೆ

ಡಿಜೆ ಸಿಸ್ಟಂ ನಿಷೇಧ ಮಾಡಿರುವುದರಿಂದ ಗಣೇಶೋತ್ಸವದಲ್ಲಿ ಸಂಸ್ಕೃತಿ ಬಿಂಬಿಸುವ, ಗಣಪತಿ ಮಹತ್ವ ಸಾರುವಂಥ ಸಂದೇಶವುಳ್ಳ ಕಲಾ ತಂಡಗಳ ಮೆರವಣಿಗೆಯು ಮತ್ತಷ್ಟು ಅಂದಗಾಣಿಸಲ್ಪಟ್ಟಿದೆ. ಇಲ್ಲಿಯವರೆಗೆ ಯಾವುದೇ ಅಹಿತಕರ
ಘಟನೆಗೆ ಆಸ್ಪದ ನೀಡದಂತೆ ಹಬ್ಬ ಆಚರಣೆ ಮಾಡಲಾಗಿದ್ದು, ಎಲ್ಲರಿಗೂ ಮಾದರಿಯಾಗಿದೆ. ಹಬ್ಬವನ್ನು ಸಂಭ್ರಮದಿಂದ ನಾಡಿನೆಲ್ಲೆಡೆ ನಡೆಯುತ್ತಿದೆ. ಇನ್ನೂ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಇದ್ದು, ಶಾಂತಿಯುತವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.

ಕಂಸಾಳೆ, ವೀರಗಾಸೆ, ಡೊಳ್ಳು ಸೇರಿದಂತೆ ಇತರೆ ಕಲಾ ತಂಡಗಳ ಕಲಾವಿದರಿಗೆ ಈ ಬಾರಿಯ ಗಣೇಶೋತ್ಸವ ವಿಶೇಷವಾಗಿದೆ. ಜನರಿಗೆ ತೊಂದರೆಯಾಗುವ ಕಾರಣದಿಂದ ಡಿಜೆ ಸಿಸ್ಟಂ ಬಳಕೆ ನಿಷೇಧಿಸಲಾಗಿದೆ. ಹೈಕೋರ್ಟ್ ಕೂಡ ನಿಷೇಧಿಸಿದೆ. ಜಿಲ್ಲಾಡಳಿತವು ಸಹ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಕೆಲವರು ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಕಾಯುತ್ತಿರುತ್ತಾರೆ. ಆದಕಾರಣ ಎಲ್ಲರೂ ಎಚ್ಚರದಿಂದ ಸಂಭ್ರಮದಿಂದ ಗಣೇಶೋತ್ಸವ ಆಚರಿಸಿ ಎಂದು ಕಿವಿಮಾತು ಹೇಳಿದರು.

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ಎಂಸಿಸಿ ಬಿ ಬ್ಲಾಕ್ ನಲ್ಲಿ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಸೂಚನೆ ಮೇರೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯು ಶಾಂತಿಯುತವಾಗಿ, ಯಾವುದೇ ರೀತಿಯ ಗಲಾಟೆಗೆ ಆಸ್ಪದ ನೀಡದಂತೆ ಮುನ್ನಚ್ಚರಿಕೆ ವಹಿಸಿ ಶಾಂತಿ ಕಾಪಾಡುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಹಬ್ಬದ ಸಂಭ್ರಮಕ್ಕೆ ಈ ಬಾರಿ ಕಲಾ ತಂಡಗಳು ಮೆರಗು ನೀಡಿವೆ ಎಂದು ತಿಳಿಸಿದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಭಕ್ತರಿಗೆ ಪ್ರಸಾದ ಬಡಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದು ಖುಷಿ ತಂದಿದೆ. ಅವರ ಸರಳತೆ ಎಲ್ಲರನ್ನೂ ಸೆಳೆಯಿತು. ವಾರ್ಡ್ ನ ಹಿರಿಯರು, ನಾಗರಿಕರು, ಜನರ ಸಹಕಾರದಿಂದ ಶಾಂತಿಯುತವಾಗಿ ಗಣೇಶೋತ್ಸವ ನಡೆಯುತ್ತಿದೆ. ಇದಕ್ಕೆ ವಾರ್ಡ್ ಜನರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಈ ವೇಳೆ ಎಂಸಿಸಿ ಬಿ ಬ್ಲಾಕ್ ನ ಹಿರಿಯ ನಾಗರಿಕರು, ಮಹಿಳೆಯರು, ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ಆಯೋಜಕರು, ಮಹಿಳೆಯರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment