ದಾವಣಗೆರೆ: ಹರಿಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 37 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಮಾ.25 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಆಕ್ಷೇಪಣೆಗಳಲ್ಲಿದ್ದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
READ ALSO THIS STORY: ಬೆಂಗಳೂರಿನಲ್ಲಿ 18,000 ರೂ.ನಲ್ಲೇ ಬಿಂದಾಸ್ ಲೈಫ್: ದುಬೈನಲ್ಲಿ ಹೆಚ್ಚು ದುಡಿದ್ರೂ ಇಲ್ಲ ಸಂತೋಷ, ನೆಮ್ಮದಿ!
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 8 ರಂದು ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸೆ.22 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು
ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.