ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಸ್ತ್ರಗಳಿಂದಲ್ಲ ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ ಪ್ರೀತಿಯಿಂದ ಬದುಕು ಅರಳಿಸಬಹುದು: ಬಾನು ಮುಷ್ತಾಕ್

On: September 22, 2025 1:35 PM
Follow Us:
Banu Mushtaq
---Advertisement---

SUDDIKSHANA KANNADA NEWS/ DAVANAGERE/DATE:22_09_2025

ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು.

READ ALSO THIS STORY: ಹೊನ್ನಾಳಿ ಹಿರೇಕಲ್ಮಠದಲ್ಲೇ ಆನೆ ಸುಭದ್ರ ಉಳಿದಿದ್ದು ಹೇಗೆ?: ಸಂಘರ್ಷಕ್ಕೀಡಾಗಿದ್ದು ಸಾಮರಸ್ಯವಾಗಿ ಮಾರ್ಪಟ್ಟಿದ್ದು ಹೇಗೆ?

ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ:

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ದಸರಾ- ಶಾಂತಿಯ ಹಬ್ಬ, ಸೌಹಾರ್ದದ ಮೇಳ

ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ.

ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment