SUDDIKSHANA KANNADA NEWS/DAVANAGERE/DATE:11_10_2025
ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 13 ಮತ್ತು 14 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
ಈ ಸುದ್ದಿಯನ್ನೂ ಓದಿ: 150 ಕೋಟಿ ರೂ. ವಂಚನೆ, ಖಾತೆಯಲ್ಲಿ 18 ಕೋಟಿ ರೂ. ಹಣ ಹೊಂದಿದ್ದ ವಂಚಕರು: ಸೆರೆ ಸಿಕ್ಕ ಆರೋಪಿ ಹಿಸ್ಟರಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.