ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಕ್ಕೆ ಸರ್ಕಾರ ಕ್ರಮ: ಹಿಂದೂಗಳ ಕೆಂಗಣ್ಣಿಗೆ ಮತ್ತೆ ಗುರಿಯಾದ ಸಿಎಂ ಸಿದ್ದರಾಮಯ್ಯ!

On: October 13, 2025 8:54 AM
Follow Us:
ಸಿದ್ದರಾಮಯ್ಯ
---Advertisement---

SUDDIKSHANA KANNADA NEWS/DAVANAGERE/DATE:13_10_2025

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ನಿಷೇಧಕ್ಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ.

READ ALSO THIS STORY: RRB NTPC ನೇಮಕಾತಿ 2025-26: 8850 ಸ್ಟೇಷನ್ ಮಾಸ್ಟರ್, ಕ್ಲರ್ಕ್ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಚಿವ ಪ್ರಿಯಾಂಕ್ ಖರ್ಗೆ ಅವರು ಯಾವುದೇ ಸರ್ಕಾರಿ ಸ್ಥಳಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಹಲವೆಡೆ ಆರ್ ಎಸ್ ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದನೆ ಮಾಡಿರುವುದು ವಿವಾದಕ್ಕೆ ಮತ್ತಷ್ಟು ಕಿಚ್ಚು ಹಚ್ಚಿಸಿದೆ.

ಪ್ರಿಯಾಂಕ್ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯರ ಈ ನಿರ್ಧಾರಕ್ಕೆ ಬಿಜೆಪಿ ನಿಗಿನಿಗಿ ಕೆಂಡವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಜರಿಯುವ ಕಾರ್ಯಕ್ಕಾಗಿಯೇ ಕಾಂಗ್ರೆಸ್ ಬಿಕೆ ಹರಿಪ್ರಸಾದ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಯೋಜಿಸಲ್ಪಟ್ಟಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನ ಪೂರೈಸಿ ತನ್ನ ಚಟುವಟಿಕೆಗಳನ್ನು ವಿಶ್ವಮಟ್ಟದಲ್ಲಿ ವಿಸ್ತರಿಸುವ ಮೂಲಕ ಯುಗದ ಇತಿಹಾಸ ಬರೆಯುತ್ತಿರುವುದನ್ನು ಸಹಿಸಲಾರದ ಕಾಂಗ್ರೆಸ್ಸಿಗರು ಸಂಘದ ಕುರಿತು ಕುಚೋದ್ಯ ಹಾಗೂ ಕುಚೇಷ್ಟೆ ಮಾತುಗಳನ್ನಾಡುವುದನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿಸ್ತು, ಸಂಯಮ, ಶಾಂತಿಯ ಎಲ್ಲೆಯನ್ನು ಎಂದೂ ಮೀರಿದ ಉದಾಹರಣೆಗಳಿಲ್ಲ, ಸರ್ಕಾರಿ ಸ್ಥಳವಿರಲಿ, ಖಾಸಗಿ ಸ್ಥಳವಿರಲಿ, ರಾಷ್ಟ್ರೀಯತೆಯನ್ನು ಪ್ರತಿನಿಧಿಸಿ ನಡೆಸುತ್ತಿರುವ ಕಾರ್ಯಕ್ರಮಗಳನ್ನು
ಹಳದಿ ಕಣ್ಣಿನಿಂದ ನೋಡುತ್ತಿರುವ ಪರಿ ರಾಷ್ಟ್ರ ವಿದ್ವಾಂಸಕ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೆಂಡಮಂಡಲರಾಗಿದ್ದಾರೆ.

ರಾಜ್ಯದ ಅಭಿವೃದ್ಧಿಯಲ್ಲಿ ಸಂಪೂರ್ಣ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿಗಾದಿಯ ವಿಷಯದಲ್ಲಿ ಬುಗಿಲೆದ್ದಿರುವ ಆಂತರಿಕ ಕಲಹದ ವಿಷಯವನ್ನು ದಿಕ್ಕು ತಪ್ಪಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹೆಸರನ್ನು ಬಳಸಿ ವಿಷಯಾಂತರ ಮಾಡಲು ಹೊರಟಿದೆ. ಬಿಕೆ ಹರಿಪ್ರಸಾದ್ ಹಾಗೂ ಪ್ರಿಯಾಂಕ ಖರ್ಗೆ ಅವರಿಗೆ ಆರ್ ಎಸ್ ಎಸ್ ಹೆಸರು ನಿತ್ಯ ಪಠಿಸದಿದ್ದರೆ ತಿಂದ ಅನ್ನ ಅರುಗುವುದಿಲ್ಲ ಎಂಬಂತೆ ವರ್ತಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ನೀಲಾಕಾಶದಲ್ಲಿ ಭಾರತದ ಭರವಸೆಯ ಬೆಳಕಿನ ನಕ್ಷತ್ರವಾಗಿ ಮಿನುಗುತ್ತಿದೆ, ಹಿಮಾಲಯದೆತ್ತರ ಬೆಳೆದು ನಿಂತಿದೆ. “ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ” ಸಭ್ಯತೆ, ಘನತೆ, ವ್ಯಕ್ತಿತ್ವವಿಲ್ಲದ ಮಾತುಗಳು ರಾಜಕೀಯ ಟೀಕೆ ಆಗಲಾರದು,
ಅದೇನಿದ್ದರೂ ಹೊಲಸು ರಾಜಕಾರಣದ ಪ್ರತಿಬಿಂಬವಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Leave a Comment