SUDDIKSHANA KANNADA NEWS/DAVANAGERE/DATE:13_10_2025
ಬೆಂಗಳೂರು: ಸರ್ಕಾರಿ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ನಿಷೇಧಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ಸಖತ್ ತಿರುಗೇಟು ನೀಡಿದೆ.
READ ALSO THIS STORY: RRB NTPC ನೇಮಕಾತಿ 2025-26: 8850 ಸ್ಟೇಷನ್ ಮಾಸ್ಟರ್, ಕ್ಲರ್ಕ್ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂದು ನೀವು ಆರೆಸ್ಸೆಸ್ ವಿರುದ್ಧ ವಿಷ ಕಾರುತ್ತಾ ಸಂಘದ ಚಟುವಟಿಕೆ “ನಿಷೇಧಿಸಬೇಕು” ಎಂದು ಹೇಳುತ್ತಿದ್ದೀರ. ಆದರೆ 2002ರಲ್ಲಿ ಬೆಂಗಳೂರಿನ ನಾಗವಾರದಲ್ಲಿ ನಡೆದ ಸಮರಸತಾ ಸಂಗಮ ಕಾರ್ಯಕ್ರಮದ ಸಮಯದಲ್ಲಿ, ಅಂದು ಗೃಹಸಚಿವರಾಗಿದ್ದ ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಆ ಶಿಬಿರಕ್ಕೆ ಭೇಟಿ ನೀಡಿ, ಆರೆಸ್ಸೆಸ್ನ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿಕೊಂಡು, ಪೂರ್ಣ ಸಹಕಾರ ನೀಡಿದ್ದರು ಎಂಬುದನ್ನು ಮರೆತಿದ್ದೀರಾ? ಎಂದು ಪ್ರಿಯಾಂಕ್ ಖರ್ಗೆಗೆ ಪ್ರಶ್ನೆ ಹಾಕಿದೆ.
ನೀವು ಇಂದು ಹೈಕಮಾಂಡ್ ಮೆಚ್ಚಿಸಲು ನಾಟಕವಾಡುತ್ತಿದ್ದೀರಾ? ಮೊದಲು ಮನೆಯ ಇತಿಹಾಸ ತಿಳಿದು ನಂತರ ರಾಷ್ಟ್ರಸೇವಕರ ಬಗ್ಗೆ ಎಂದು ಬಿಜೆಪಿ ಕೆಂಡಾಮಂಡಲವಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ ತಿಳಿಯದವರು ನಿಷೇಧದ ಬಗ್ಗೆ ಮಾತನಾಡುತ್ತಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಮೊದಲು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.