SUDDIKSHANA KANNADA NEWS/ DAVANAGERE/ DATE:13-10-2023
ಬೆಂಗಳೂರು: ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.
Read Also This Story:
ಹಿಂದೂ ಮಹಾಗಣಪತಿ ವಿಸರ್ಜನೆಗೆ ಲಕ್ಷಾಂತರ ಜನರು: ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ಇಲಾಖೆ ಕೊಟ್ಟಿರುವ ಕಟ್ಟುನಿಟ್ಟಿನ ಸೂಚನೆಗಳೇನು… ಎಚ್ಚರಿಕೆಗಳೇನು..?
ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಜಾಸ್ತಿಯಾಗಿದೆ ಎಂದರು.
ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂಬ ಕುರಿತಂತೆ ಚರ್ಚಿಸಲಾಗುತ್ತದೆ ಎಂದರು.
ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.