ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

On: October 28, 2025 5:55 PM
Follow Us:
job
---Advertisement---

SUDDIKSHANA KANNADA NEWS/DAVANAGERE/DATE:28_10_2025

ಶಿವಮೊಗ್ಗ: ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಆಯನೂರು ಹಾಗೂ ನಿದಿಗೆ-1 ರ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ದಾವಣಗೆರೆ ಸಿದ್ಧಗಂಗಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಗಿರೀಶ್ ಆರ್. ನೇಸರ್ಗಿ ಅದ್ವಿತೀಯ ಸಾಧನೆ

ಅರ್ಜಿ ಸಲ್ಲಿಸುವವರು 45 ವರ್ಷ ಮೀರಿರಬಾರದು. ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆಯಲ್ಲಿ 1 ವರ್ಷ ಸೇವಾನುಭವ ಹೊಂದಿರಬೇಕು. ಕೃಷಿ ಅಥವಾ ಕೃಷಿ ಸಂಬAಧಿತ ವಿಷಯದಲ್ಲಿ ಪದವಿ/ಸ್ನಾತಕ್ಕೋತ್ತರ ಪದವಿಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪದವಿ/ಸ್ನಾತಕ್ಕೋತ್ತರ ಪದವಿಯ ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ದಾಖಲಾತಿಗಳನ್ನು ಹೊಂದಿರಬೇಕು.

ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೇವಾ ಅನುಭವ ಪ್ರಮಣ ಪತ್ರ, ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ಪ್ರಮಾಣ ಆದೇಶ ಪತ್ರ, ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧಪಟ್ಟ ಸಂಸ್ಥೆಯಿAದ ಹಾಜರಾತಿ ಪ್ರಮಾಣ ಪತ್ರ, ಸಂಸ್ಥೆಯಿಂದ ವೇತನ ದೃಢೀಕರಣ ಹಾಗೂ ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳನ್ನು ಲಗತ್ತಿಸಿ ನ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-221906 ನ್ನು ಸಂಪರ್ಕಿಸುವುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment