ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Channagiri: ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆ: ತಾಯಿ, ಪುತ್ರಿ ಸೂಳೆಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು

On: October 16, 2023 8:28 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-10-2023

ದಾವಣಗೆರೆ: ವರದಕ್ಷಿಣ ಕಿರುಕುಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಪುತ್ರಿಯೊಂದಿಗೆ ಚನ್ನಗಿರಿ (Channagiri) ತಾಲೂಕಿನ ಸೂಳೆಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.

ಈ ಸುದ್ದಿಯನ್ನೂ ಓದಿ: 

ಸ್ಕಾಚ್ ವಿಸ್ಕಿ (Scotch whisky) ಬಗ್ಗೆ ನಿಮಗೆಷ್ಟು ಗೊತ್ತು… ದೇಸಿ ಬ್ರಾಂಡ್‌ಗಳ ಭಾರೀ ಬೆಳವಣಿಗೆ: ಭಾರತದ ಸಿಂಗಲ್-ಮಾಲ್ಟ್ ಉದ್ಯಮದ ಏರಿಕೆ

ಹೊನ್ನೆಬಾಗಿ ಗ್ರಾಮದ ಕವಿತಾ (27) ಹಾಗೂ ಪುತ್ರಿ ನಿಹಾರಿಕಾ (5) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ವಿರುದ್ಧ ಮೃತಳ ಪೋಷಕರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಕವಿತಾ ಹಾಗೂ ಪುತ್ರಿ ನಿಹಾರಿಕಾ ಮನೆಯಿಂದ ಹೊರ ಹೋದವರು ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮಂಜುನಾಥ್ ಅವರು ಚನ್ನಗಿರಿ ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟಿದ್ದರು.

ಆದ್ರೆ, ಶುಕ್ರವಾರದಿಂದ ತಾಯಿ ಹಾಗೂ ಮಗುವಿನ ಮೃತದೇಹ ಸೂಳೆಕೆರೆಯಲ್ಲಿ ಕಂಡು ಬಂದಿದ್ದು, ಈ ವೇಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪತಿ ಮಂಜುನಾಥ್ ತನ್ನ ಪುತ್ರಿ ಕವಿತಾಳಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment