ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶ್ರವಣ ದೋಷ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ

On: March 9, 2023 12:11 PM
Follow Us:
---Advertisement---

ದಾವಣಗೆರೆ;  ಶ್ರವಣದೋಷ ಇರುವ ಎಲ್ಲಾ ವಯೋಮಾನದ ವ್ಯಕ್ತಿಗಳ ಕಲ್ಯಾಣಕ್ಕಾಗಿ ಶ್ರಮಿಸುವುದು ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮವನ್ನು ಉದ್ದೇಶವಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕಾ ಆಸ್ಪತ್ರೆ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ಹೇಳಿದರು.

ಆವರಗೊಳ್ಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾರ್ಚ್ 3 ರಂದು ನಡೆದ  ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮವನ್ನು ಉದ್ದೇಶಿಸಿ  ಮಾತನಾಡಿದ ಅವರು ಎಲ್ಲಾ ವಯೋಮಾನದವರು ಕಿವಿಯ ಸ್ವಚ್ಛತೆ ಮತ್ತು ಸುರಕ್ಷತೆ ಕುರಿತು ಗಮನ ಹರಿಸದಿದ್ದರೆ,  ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಗರ್ಭಿಣಿಯರ ಆರೋಗ್ಯ ಉತ್ತಮವಾಗಿಟ್ಟುಕೊಳ್ಳುವುದರ ಮೂಲಕ ಹುಟ್ಟಿನಿಂದ ಬರಬಹುದಾದ ಶ್ರವಣ ದೋಷUಳನ್ನು ತಡೆಗಟ್ಟಬಹುದು ಎಂದರು.

ಬೇಸಿಗೆಕಾಲದಲ್ಲಿ ಅತಿಯಾದ ಉಷ್ಣಾಂಶದಿಂದ  ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚು ನೀರು ಕುಡಿಯುವುದು. ನಿಂಬೆ ಹಣ್ಣಿನ ಶರಭತ್ತು, ಹಣ್ಣುಗಳು ಮತ್ತು  ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.  ತಿಳಿ ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ  ಛತ್ರಿ    ಬಳಸಬೇಕು ಹಾಗೂ ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದರು.

ಕಾರ್ಯಕ್ರಮದಲ್ಲಿ   ಜಿಲ್ಲಾ ಸಮನ್ವಯಾಧಿಕಾರಿಗಳಾದ  ನಿರಂಜನ್ ಮೂರ್ತಿ, ಸ.ಹಿ.ಪ್ರಾ. ಶಾಲೆ  ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು,  ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು,ಶ್ರವಣ

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment