ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾಲೇಜು ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ…! ಇಬ್ಬರ ಬಂಧನ, ಆಟೋರಿಕ್ಷಾ ವಶ

On: November 23, 2023 2:29 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:23-11-2023

ದಾವಣಗೆರೆ: ಕಾಲೇಜು ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ.

ಹಾವೇರಿ ನಗರದ ಚಾಲಕ ಗಗನ್ ಆನವಟ್ಟಿ (26) ಹಾಗೂ ರಾಣೇಬೆನ್ನೂರು ತಾಲೂಕಿನ ಸುಜಲ್ ಎಸ್. ಜೈನ್ (21) ಬಂಧಿತ ಆರೋಪಿಗಳು. ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಕ್ರೀಡಾಂಗಣದ ಒಳಭಾಗದಲ್ಲಿ ಆಟೋದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ.

ಆರೋಪಿತರ ಬಳಿ ಇದ್ದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ 490 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 1,50,000 ರೂ. ಬೆಲೆಯ ಆಟೋರಿಕ್ಷಾ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಕೆಟಿಜೆ ನಗರ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ಡಿ, ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಶಿಧರ ಯು. ಜೆ. ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಸಾಗರ್ ಅತ್ತರವಾಲ ರವರ ಸಾರಧ್ಯದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.

ಗಾಂಜಾ ದಾಳಿ ಪ್ರಕರಣದಲ್ಲಿ ಯಶಸ್ವಿಯಾದ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ಡಿ., ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಶಿಧರ, ಪಿಎಸ್‌ಐ (ಕಾ&ಸು) ಸಾಗರ್ ಅತ್ತರವಾಲ & ಕೆಟಿಜೆ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿ ಶಂಕರ್ ಜಾಧವ್, ಪ್ರಕಾಶ್ ಮಂಜಪ್ಪ ಎಂ, ಷಣ್ಮುಖ.ಕೆ, ಶಿವರಾಜ ಎಂ.ಎಸ್. ರವಿ.ಎಂ, ಹರೀಶ್.ಡಿ. ರವರ ಪತ್ತೆ ಕಾರ್ಯವನ್ನು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ವಿಜಯಕುಮಾರ ಎಂ. ಸಂತೋಷ್ ಅವರು ಅಭಿನಂದಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment