ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ, ಸಮೀಕ್ಷೆಗಳ ವಿರುದ್ಧ ಮಾಜಿ ಸಿಎಂ ಕಮಲ್ ನಾಥ್ ಆಕ್ರೋಶ ವ್ಯಕ್ತಪಡಿಸಿದ್ಯಾಕೆ…?

On: December 1, 2023 3:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-12-2023

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಭವಿಷ್ಯ ನುಡಿದ ಏಜೆನ್ಸಿಗಳ ಎಕ್ಸಿಟ್ ಪೋಲ್ ಫಲಿತಾಂಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಕ್ಸಿಟ್ ಪೋಲ್ ನಿಂದ “ಸುಳ್ಳು ವಾತಾವರಣ” ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿರುವ ಅವರು, ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದರು. ಕೆಲವು ಎಕ್ಸಿಟ್ ಪೋಲ್ ಏಜೆನ್ಸಿಗಳು ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹೇರಲು ಬಯಸಿವೆ ಎಂದು ಆರೋಪಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಡಿಸೆಂಬರ್ 3 ರಂದು ನಿಷ್ಪಕ್ಷಪಾತ ಎಣಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು

“ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಪೂರ್ಣ ಬಲದಿಂದ ಕ್ಷೇತ್ರಕ್ಕೆ ಇಳಿಯಬೇಕು. ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋತಿದೆ, ಕಾಂಗ್ರೆಸ್ ಕಾರ್ಯಕರ್ತರು ನಿರಾಶೆಗೊಳ್ಳಲು ಉದ್ದೇಶಪೂರ್ವಕವಾಗಿ ಕೆಲವು ಎಕ್ಸಿಟ್ ಪೋಲ್‌ಗಳನ್ನು ರಚಿಸಲಾಗಿದೆ, ಸುಳ್ಳು ವಾತಾವರಣ ಸೃಷ್ಟಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗಿದೆ. ಈ ಪಿತೂರಿ ಯಶಸ್ವಿಯಾಗುವುದಿಲ್ಲ,” ಎಂದು ಅವರು ಹೇಳಿದರು.

“ನಾವೆಲ್ಲರೂ ಗೆಲ್ಲಲು ಸಿದ್ಧರಿದ್ದೇವೆ ಮತ್ತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ನಿಮಗೆ (ಪಕ್ಷದ ಕಾರ್ಯಕರ್ತರಿಗೆ) ಯಾವುದೇ ಸಮಸ್ಯೆ ಕಂಡುಬಂದರೆ ದಯವಿಟ್ಟು ನನ್ನೊಂದಿಗೆ ನೇರವಾಗಿ ಮಾತನಾಡಿ ಅಥವಾ ಡಿಸೆಂಬರ್ 3 ರಂದು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಕಚೇರಿಗೆ ತಿಳಿಸಿ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲಿದೆ. ಡಿಸೆಂಬರ್ 3 ರಂದು ನಮ್ಮ ಪರವಾಗಿ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಲವು ಎಕ್ಸಿಟ್ ಪೋಲ್‌ಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ದೈನಿಕ್ ಭಾಸ್ಕರ್ ಬಿಜೆಪಿಗೆ 95-115 ಮತ್ತು ಕಾಂಗ್ರೆಸ್‌ಗೆ 105-120 ಸ್ಥಾನಗಳನ್ನು ಭವಿಷ್ಯ ನುಡಿದಿದೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಬಿಜೆಪಿಗೆ 140-162 ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ 70-89 ಸ್ಥಾನಗಳನ್ನು ನೀಡಿದೆ. ಟುಡೇಸ್ ಚಾಣಕ್ಯ ಬಿಜೆಪಿಗೆ 151 ಸ್ಥಾನ ಮತ್ತು ಕಾಂಗ್ರೆಸ್ 74, ಜನ್ ಕಿ ಬಾತ್ ಎಕ್ಸಿಟ್ ಪೋಲ್ ಬಿಜೆಪಿಗೆ 100-123 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 102-125, ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಬಿಜೆಪಿಗೆ 118-130 ಸ್ಥಾನಗಳನ್ನು ಮತ್ತು 97 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ.

ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment