ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ಇಬ್ಬರು ಸಾವು, ಏಳು ಮಂದಿಗೆ ಗಾಯ

On: December 4, 2023 2:11 PM
Follow Us:
---Advertisement---

SUDDIKSHANA KANNADA NEWS\ DAVANAGERE\ DATE:04-11-2023

ದಾವಣಗೆರೆ: ನಗರದಹೊರಭಾಗದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತರನ್ನು ಅರುಣ್‌ಕುಮಾರ್ ಶೆಟ್ಟರ್, ವಿಜಯಲಕ್ಷ್ಮೀ ಶೆಟ್ಟರ್ ಎಂದು ಗುರುತಿಸಲಾಗಿದೆ.

ಕಾರು ಮತ್ತು ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿರುವ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಓವರ್ ಟೇಕ್ ಮಾಡುತ್ತಿದ್ಧಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ‌.

ಅರುಣಕುಮಾರ್ ಶೆಟ್ಟರ್ ಹಾಗೂ ವಿಜಯಲಕ್ಷ್ಮೀ ಶೆಟ್ಟರ್ ಸೇರಿದಂತೆ ಏಳು ಮಂದಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಇನ್ನುಳಿದಂತೆ ಚಾಲಕ ಸೇರಿ ಏಳು ಜನರು ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲಕ ಶೆಟ್ಟರ್ ಕುಟುಂಬದ ಸದಸ್ಯರು ತುಮಕೂರಿನಲ್ಲಿ ಮದುವೆ ಮುಗಿಸಿಕೊಂಡು ರಾಣೆಬೆನ್ಣೂರಿಗೆ ತೆರಳುತ್ತಿದ್ದರು.ಈ ವೇಳೆ ದಾವಣಗೆರೆ ಹೊರಭಾಗದ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment